Thursday, November 19, 2026
Thursday, November 19, 2026

ರಾ.ಹೆ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ: ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ರಾ.ಹೆ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ: ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

Date:

ಉಡುಪಿ, ನ.10: ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಮಲ್ಪೆ ಭಾಗದ ಕಿ.ಮೀ. 85.200 ರಿಂದ 85.580 ರ ವರೆಗಿನ (ಆದಿ ಉಡುಪಿ ಭಾಗದ) ಚತುಷ್ಪಥದ ರಸ್ತೆಯ ಎರಡೂ ಬದಿಯಲ್ಲಿ ಏಕಕಾಲದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ರಸ್ತೆಯ ಕಾಮಗಾರಿಯು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) & (5) ರನ್ವಯ ನವೆಂಬರ್ 10 ರಿಂದ 30 ರ ವರೆಗೆ ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ- ಮಲ್ಪೆ ರಸ್ತೆಯ ಮಲ್ಪೆ ಭಾಗದ ಕಿ.ಮೀ. 85.200 ರಿಂದ 85.580 ರ ವರೆಗಿನ (ಆದಿ ಉಡುಪಿ ಭಾಗದ) ಚತುಷ್ಪಥ ರಸ್ತೆಯ ಎರಡೂ ಬದಿಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಸಿ, ಸದ್ರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಈ ಕೆಳಕಂಡಂತೆ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

ಮಲ್ಪೆಯಿಂದ ಮಂಗಳೂರು ಮತ್ತು ಕುಂದಾಪುರ ಕಡೆಗೆ ಹೋಗಲು ಭಾರೀ ವಾಹನಗಳು ಮಲ್ಪೆ-ಬಲರಾಮ ಸರ್ಕಲ್-ತೊಟ್ಟಂ-ಗುಜ್ಜರಬೆಟ್ಟು- ಹೂಡೆ-ನೇಜಾರ್-ಕಲ್ಯಾಣಪುರ ಮಾರ್ಗವಾಗಿ ಸಂತೆಕಟ್ಟೆ ತಲುಪಿ, ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸಬೇಕು. ಮಲ್ಪೆಗೆ ಬರುವ ಭಾರಿ ವಾಹನಗಳು ಆಶೀರ್ವಾದ್ ಸರ್ಕಲ್-ಲಕ್ಷ್ಮೀನಗರ-ಕೊಡವೂರು ಮೂಲಕ ಮಲ್ಪೆ ಕಡೆಗೆ ಸಂಚರಿಸಬೇಕು. ಮಲ್ಪೆ ಕಡೆಗೆ ಹೋಗುವ ಮತ್ತು ಬರುವ ಲಘು ವಾಹನಗಳು ಕಲ್ಮಾಡಿ ಸರ್ಕಲ್‌ನಿಂದ ಅಂಬಲಪಾಡಿ ತಲುಪಿ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಸಂಚರಿಸಬೇಕು. ಕಲ್ಮಾಡಿಯಿಂದ-ಕಿದಿಯೂರು-ಕಡೇಕಾರು-ಕನ್ನರ್‌ಪಾಡಿ ರಾಷ್ಟ್ರೀಯ ಹೆದ್ದಾರಿ ಮೂಲಕ ಅಥವಾ ಉಡುಪಿ ಕಡೆಗೆ ಸಂಚರಿಸಬೇಕು. ಮಲ್ಪೆಯಿಂದ ಮಂಗಳೂರು ಕಡೆಗೆ ಹೋಗುವ ಲಘು ವಾಹನಗಳು ಪಡುಕೆರೆ ತೊಟ್ಟಂ ಮುಖಾಂತರ ಬಲಾಯಿಪಾದೆಗೆ ಬಂದು ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...

‘ಋತು ತಾರೆ’ ವಿನೂತನ ಕಾರ್ಯಕ್ರಮ

ಬೆಂಗಳೂರು, ನ.೧೯: ಮಹಿಳೆಯರ ಮಧ್ಯವಯಸ್ಸಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸೂಕ್ತ...

ಬಂಟ್ವಾಳ: ಹೊಂಡ-ಗುಂಡಿಗಳ ವರದಿ ಬಗ್ಗೆ ಸಿಎಂ ಕಛೇರಿ ಸ್ಪಂದನೆ

ಬಂಟ್ವಾಳ, ನ.19: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲಕ ಹಾದುಹೋಗುವ...

ಮುರಳಿ ಕಡೆಕಾರ್ ಇವರಿಗೆ ಶಾರದಾಕೃಷ್ಣ ಪ್ರಶಸ್ತಿ-2027

ಉಡುಪಿ, ನ.18: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ...
error: Content is protected !!