ಕಾಪು, ನ.11: ಬೆಳ್ಳೆ ಗ್ರಾಮ ಪಂಚಾಯತ್ ಮತ್ತು ಹೃದಯಂ ಫೌಂಡೇಶನ್ ಸಹಯೋಗದೊಂದಿಗೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂತೃಪ್ತಿ ನಗರದ ಬಳಿ ಅಳವಡಿಸಲಾದ ಹೈ-ಮಾಸ್ಟ್ ದೀಪದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.
ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯಾ ಆಚಾರ್ಯ, ಉಪಾಧ್ಯಕ್ಷರಾದ ಶಶಿಧರ್ ವಾಗ್ಲೆ, ಹೃದಯಂ ಫೌಂಡೇಶನ್ ಪ್ರವರ್ತಕರಾದ ಸುಭಾಷ್ ಎಂ ಸಾಲಿಯಾನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಬೆಳ್ಳೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಆಶಲತಾ ಹಾಗೂ ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.




By
ForthFocus™