ಉಡುಪಿ, ನ.13: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಡಿಸೆಂಬರ್ 3 ಮತ್ತು 4 ರಂದು ಯಾದಗಿರಿ ಜಿಲ್ಲೆಯಲ್ಲಿ ನಡೆಯಲಿದ್ದು, ಉಡುಪಿ ಜಿಲ್ಲಾಮಟ್ಟದ ಯುವಜನೋತ್ಸವದಲ್ಲಿ ವೈಯಕ್ತಿಕ ಹಾಗೂ ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯಮಟ್ಟದಲ್ಲಿ ಭಾಗವಹಿಸಬಹುದಾಗಿದೆ.
ಜಿಲ್ಲೆಯಿಂದ ಭಾಗವಹಿಸುವ ಸ್ಪರ್ಧಿಗಳು ಡಿ.3 ರಂದು ಬೆಳಿಗ್ಗೆ 6 ರಿಂದ 9 ಗಂಟೆಯೊಳಗೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಿಗದಿತ ಪ್ರವೇಶ ಅರ್ಜಿಯೊಂದಿಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂ 0820-2521324, 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.




By
ForthFocus™