ಗಂಗೊಳ್ಳಿ, ನ.15: ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ವತಿಯಿಂದ ಗಂಗೊಳ್ಳಿಯ ಪರಿಸರದಲ್ಲಿ ಪ್ರಪ್ರಥಮ ಬಾರಿಗೆ ಮಕ್ಕಳ ದಿನಾಚರಣೆಯ ಪ್ರಯುಕ್ತ ಬಾಲಕ ಮತ್ತು ಬಾಲಕಿಯರ ಗ್ರಾಮೀಣ ಕ್ರೀಡಾ ಹಬ್ಬ ರಿಂಗಣ ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್ ಕೆ ನೆರವೇರಿಸಿದರು.
ಶಾಲಾ ಮುಖ್ಯ ಶಿಕ್ಷಕರಾಗಿರುವ ದೀಕ್ಷಿತ್ ಮೇಸ್ತ, ವಿದ್ಯಾರ್ಥಿ ನಾಯಕ ಸುಜಯ್ ಗಾಣಿಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯಾದ ವೈಷ್ಣವಿ ಪ್ರಾರ್ಥಿಸಿ, ಮಾಲಾಶ್ರೀ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು. ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆಯನ್ನು ಸಂಧ್ಯಾ ಖಾರ್ವಿ ನೆರವೇರಿಸಿದರು. ಶಾಲಾ ಶಿಕ್ಷಕ ವೃಂದ, ಶಿಕ್ಷಕ-ರಕ್ಷಕ ಸಮಿತಿಯ ಕಾರ್ಯದರ್ಶಿಗಳು ಮತ್ತು ಸರ್ವ ಸದಸ್ಯರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




By
ForthFocus™