ಕಾಪು, ನ.16: ಪಲಿಮಾರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವ ಸಮಾರಂಭ ನಡೆಯಿತು. ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ವಿವೇಕ ಕೊಠಡಿಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಲಭ್ಯವಿರುವ ಸಂಪನ್ಮೂಲಗಳ ಸದ್ಬಳಕೆಯನ್ನು ಮಾಡುವ ಮೂಲಕ ಉತ್ತಮ ಫಲಿತಾಂಶದೊಂದಿಗೆ ಕಾಲೇಜಿಗೆ ಮತ್ತು ಹೆತ್ತವರಿಗೆ ಕೀರ್ತಿ ತರಬೇಕು ಎಂದರು.
ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮಲತಾ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಸಾದ್ ಪಲಿಮಾರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಗಣೇಶ್ ಆಚಾರ್ಯ, ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಅಡ್ವೆ, ಪ್ರೀಯಾ, ಸುಜಾತಾ, ಪ್ರಾಂಶುಪಾಲರಾದ ಗ್ರೆಟ್ಟಾ ಮೊರಾಸ್, ಹಿರಿಯ ಶಿಕ್ಷಕರಾರದ ಮಾಧವ ಸಾಲಿಯಾನ್ ಹಾಗೂ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




By
ForthFocus™