Thursday, September 10, 2026
Thursday, September 10, 2026

National Beauty Pageant: ಉಡುಪಿಯ ಸಚಿತ ರಾವ್ ಅವರಿಗೆ ವಿನ್ನರ್ ಪ್ರಶಸ್ತಿ

National Beauty Pageant: ಉಡುಪಿಯ ಸಚಿತ ರಾವ್ ಅವರಿಗೆ ವಿನ್ನರ್ ಪ್ರಶಸ್ತಿ

Date:

ಉಡುಪಿ, ನ.18: ಉಡುಪಿಯ ಸಚಿತ ರಾವ್ ಅವರು ಬೆಂಗಳೂರಿನ ಆರ್ ಆರ್ ನಗರದಲ್ಲಿ ನಡೆದ National Level Beauty Pageant ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಮಿಸ್ ಮಲೆನಾಡು 2025ರ ಬ್ಯೂಟಿ ಕಾಂಟೆಸ್ಟ್ನಲ್ಲಿ ಮೊದಲ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

ಉಡುಪಿಯ ಪುತ್ತೂರು ನಿವಾಸಿ ಸಚಿನ್ ರಾವ್ ಹಾಗೂ ಅಶ್ವಿನಿ ರಾವ್ ದಂಪತಿಗಳ ಪುತ್ರಿಯಾದ ಸಚಿತ ರಾವ್, ಉಡುಪಿಯ ಸಿಲಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಉಡುಪಿಯ ಸ್ಪೂರ್ತಿ ಶೆಟ್ಟಿಯವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ಬ್ಯೂಟಿ ಕಾಂಟೆಸ್ಟ್ನ ಕಾರ್ಯಕ್ರಮದಲ್ಲಿ ಡ್ರೆಸ್ಸಿಂಗ್ ವಿಭಾಗದಲ್ಲಿ ಉಡುಪಿಯ ಗೀತಾಂಜಲಿ ಸಿಲ್ಕ್ಸ್ ಹಾಗೂ ಉಡುಪಿಯ ಖ್ಯಾತ ಮೇಕಪ್ ಆರ್ಟಿಸ್ಟ್ ನಾಗಶ್ರೀ ಆರ್ ಆಚಾರ್ಯ ಸಹಕರಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!