Sunday, March 29, 2026
Sunday, March 29, 2026

ಜ್ಞಾನಸುಧಾ: ಮೌಲ್ಯಸುಧಾ-42

ಜ್ಞಾನಸುಧಾ: ಮೌಲ್ಯಸುಧಾ-42

Date:

ಗಣಿತನಗರ, ನ.18: ಇದ್ದ ಬದುಕನ್ನು ಬಿದ್ದು ಹೋಗದಂತೆ, ಸಮಸ್ಯೆಯನ್ನು ಒದ್ದು, ಎಲ್ಲವನ್ನೂ ಗೆದ್ದು ಬರಬೇಕು. ಅದೇ ಜೀವನ, ಅದೇ ಸಂಜೀವನ. ವ್ಯಕ್ತಿ ದೃಷ್ಟಿಕೋನದದಲ್ಲಿ ಬದಲಾವಣೆ ತಂದುಕೊಂಡು ಅವಮಾನವನ್ನು ಸವಾಲಾಗಿ ಸ್ವೀಕರಿಸಿ ಸಕರಾತ್ಮಕ ಯೋಚನೆಯ ಹಠ ನಮ್ಮದಾದಾಗ ಗೆಲುವು ಚಟವಾಗಲು ಸಾಧ್ಯ. ಎಂದು ರಾಜ್ಯ ಶಿಕ್ಷಕ ಪ್ರಶಸ್ತಿ ವಿಜೇತ ಕೋಟ ನರೇಂದ್ರ ಕುಮಾರ್ ರವರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-42ರಲ್ಲಿ ‘ದೀಪ ಹಚ್ಚುವ ಮೊದಲು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ನಾವೆಷ್ಟೂ ಬಾಗುತ್ತೇವೋ ಅಷ್ಟು ಜಾಣರಾಗುತ್ತೇವೆ. ಹಿರಿಯರನ್ನು, ಗುರುಗಳನ್ನು ಗೌರವಿಸುವ ಗುಣ ನಮ್ಮದಾಗಲಿ. ಉತ್ತಮ ಕೇಳುಗರಾದರೆ ಅತ್ಯುತ್ತಮ ಮಾತುಗಾರರಾಗುತ್ತೇವೆ. ನಾವು ಸಂಬಂಧಗಳನ್ನು ಬೆಸೆಯುವ ಸೂಜಿಗಳಾಗಬೇಕು ಎಂದರು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಅನಿಲ್ ಕುಮಾರ್ ಜೈನ್, ಸಿ.ಇ.ಒ ಹಾಗೂ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರ್, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಉಪಪ್ರಾಂಶುಪಾಲರಾದ ಸಾಹಿತ್ಯ ಉಪಸ್ಥಿತರಿದ್ದರು. ಪ್ರಥಮ ಪಿಯುಸಿಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧನ್ಯಾ ಜಿ .ಗೌಡ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ

ನವದೆಹಲಿ, ಮಾ.28: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೋಯ್ಡಾದ ಜೇವರ್‌ನಲ್ಲಿ...

ಮಲಬಾರ್ ವಿಶ್ವರಂಗ ಪುರಸ್ಕಾರ

ಉಡುಪಿ, ಮಾ.28: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಮತ್ತು ಮಲಬಾರ್ ಗೋಲ್ಡ್ ಅಂಡ್...

ಇಂಧನ ಬೆಲೆ ಏರಿಕೆ ಇಲ್ಲ; ಲಾಕ್‌ಡೌನ್ ವದಂತಿಗಳನ್ನು ತಳ್ಳಿ ಹಾಕಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ, ಮಾ.27: ಪೆಟ್ರೋಲ್, ಡೀಸೆಲ್ ಮತ್ತು ವಿಮಾನಯಾನ ಟರ್ಬೈನ್ ಇಂಧನ (ಎಟಿಎಫ್)...
error: Content is protected !!