Wednesday, September 30, 2026
Wednesday, September 30, 2026

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ

Date:

ಉಡುಪಿ, ನ.19: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025 -28ನೇ ಸಾಲಿನ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನ.19 ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಜರಗಿತು.

ಸಂಘದ ಚುನಾವಣಾಧಿಕಾರಿಯೂ ಆಗಿರುವ ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಸಂಘದ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಿಕೊಟ್ಟ ಚುನಾವಣಾಧಿಕಾರಿ ಅವರನ್ನು ಸನ್ಮಾನಿಸಲಾಯಿತು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಹರೀಶ್ ಕುಂದರ್, ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್, ಉಪಾಧ್ಯಕ್ಷರುಗಳಾದ ಉದಯ ಕುಮಾರ್ ಮುಂಡ್ಕೂರು, ಉದಯ ಕುಮಾರ್ ಶೆಟ್ಟಿ, ಕಾರ್ಯದರ್ಶಿಗಳಾದ ಉಮೇಶ್ ಮಾರ್ಪಳ್ಳಿ, ಸುರೇಶ್ ಎರ್ಮಾಳ್, ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಪ್ರಜ್ವಲ್ ಅಮೀನ್, ಜನಾರ್ದನ ಕೊಡವೂರು, ಚೇತನ್ ಮಟಪಾಡಿ, ವಿಜಯ ಆಚಾರ್ಯ ಉಚ್ಚಿಲ, ಪ್ರಮೋದ್ ಸುವರ್ಣ, ಪ್ರವೀಣ್ ಮುದ್ದೂರು, ಮೋಹನ್ ಉಡುಪ, ಮುಹಮ್ಮದ್ ಶರೀಫ್ ಕಾರ್ಕಳ, ರಮಾನಂದ ಅಜೆಕಾರು, ಚಂದ್ರಶೇಖರ್, ಯೋಗೀಶ್ ಕುಂಭಾಶಿ, ರಾಘವೇಂದ್ರ ಪೈ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!