Thursday, October 1, 2026
Thursday, October 1, 2026

ಮಿದುಳು ತಿನ್ನುವ ಅಮೀಬಾ ಕುರಿತು ಶಬರಿಮಲೆ ಯಾತ್ರಿಕರಿಗೆ ಮುನ್ನೆಚ್ಚರಿಕೆ ವಹಿಸಲು ಸುರಕ್ಷತಾ ಮಾರ್ಗಸೂಚಿ

ಮಿದುಳು ತಿನ್ನುವ ಅಮೀಬಾ ಕುರಿತು ಶಬರಿಮಲೆ ಯಾತ್ರಿಕರಿಗೆ ಮುನ್ನೆಚ್ಚರಿಕೆ ವಹಿಸಲು ಸುರಕ್ಷತಾ ಮಾರ್ಗಸೂಚಿ

Date:

ಉಡುಪಿ, ನ.19: ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿನಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆ, ರಾಜ್ಯದ ಶಬರಿಮಲೆ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ/ ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಈ ಕೆಳಕಂಡಂತೆ ಸಲಹೆಗಳನ್ನು ನೀಡಲಾಗಿದೆ. ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ. ನೇಗ್ಲೇರಿಯಾ ಫೌಲೇರಿ ಅತ್ಯಂತ ವಿಷಕಾರಿ ಸೂಕ್ಷ್ಮ ಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ನೆಫಲೈಟಿಸ್ ಎನ್ನುವ ಅಪರೂಪದ ಗಂಭೀರ/ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‌ಗಳನ್ನು ಬಳಸಿ ಅಥವಾ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸಬೇಕು.

ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ, ತೀವು ತಲೆನೋವು, ವಾಕರಿಕೆ/ವಾಂತಿ, ಕುತ್ತಿಗೆ ಬಿಗಿತ, ಗೊಂದಲ/ ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ ಲಕ್ಷಣಗಳು ಕಾಣಿಸಿಕೊಂಡಲ್ಲಿ ನಿರ್ಲಕ್ಷಿಸದೇ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!