Thursday, October 1, 2026
Thursday, October 1, 2026

ಕ್ರೀಡಾಕೂಟಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವರ್ಧನೆ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಕ್ರೀಡಾಕೂಟಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವರ್ಧನೆ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

Date:

ಉಡುಪಿ, ನ.19: ಕ್ರೀಡಾಕೂಟಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವರ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯು ಆಯೋಜಿಸಿರುವ ಕ್ರೀಡಾಕೂಟದಿಂದ ಪೊಲೀಸರ ದೈಹಿಕ ಆರೋಗ್ಯದ ಜೊತೆಗೆ ಮನಸ್ಸು ಕೂಡ ಲವಲವಿಕೆಯಿಂದೊಡಗೂಡಿ ಅವರ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟ-2025 ಅನ್ನು ಉದ್ಘಾಟಿಸಿ ಮಾತನಾಡಿದರು.

ಪೊಲೀಸ್ ಇಲಾಖೆಯು ಅಚ್ಚುಕಟ್ಟಾಗಿ ಮತ್ತು ಶಿಸ್ತುಬದ್ಧವಾಗಿ ಕ್ರೀಡಾಕೂಟವನ್ನು ಆಯೋಜಿಸಿದೆ. ಕ್ರೀಡಾಮನೋಭಾವನೆಯನ್ನು ಹೆಚ್ಚಿಸುವ ಇಂತಹ ಕ್ರೀಡಾಕೂಟಗಳು ನಿಯಮಿತವಾಗಿ ನಡೆಯುತ್ತಿದ್ದಾಗ ದೇಹ ಸುಸ್ಥಿತಿಯಲ್ಲಿರುತ್ತದೆ. ಪೊಲೀಸರು ಹಲವಾರು ದಿನಗಳವರೆಗೆ ನಿರಂತರವಾಗಿ ಕೆಲಸ ಮಾಡುವ ಸನ್ನಿವೇಶಗಳು ಎದುರಾಗುತ್ತವೆ. ಈ ಸಮಯದಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ಫಿಟ್ ಆಗಿರಬೇಕಾಗುತ್ತದೆ. ನಿತ್ಯವೂ ಕ್ರೀಡೆ ಅಥವಾ ವ್ಯಾಯಾಮಗಳಲ್ಲಿ ತೊಡಗಿಸಿಕೊಂಡಾಗ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳಬಹುದು. ಇತರ ಇಲಾಖೆಗಳು ಕೂಡ ಪೊಲೀಸ್ ಇಲಾಖೆಯಿಂದ ಸ್ಪೂರ್ತಿ ಪಡೆದು ಕ್ರೀಡಾಕೂಟಗಳನ್ನು ಆಯೋಜಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು. ಉದ್ಘಾಟನೆಗೂ ಮುನ್ನ ಪೊಲೀಸ್ ಇಲಾಖೆಯ ವಿವಿಧ ವಿಭಾಗದ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಅತಿಥಿಗಳು ಸಾಮೂಹಿಕ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಕ್ರೀಡಾ ಜ್ಯೋತಿ ಪ್ರದರ್ಶನ ನಡೆಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಸ್ವಾಗತಿಸಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!