Tuesday, September 8, 2026
Tuesday, September 8, 2026

ಒಳ್ಳೆಯದನ್ನು ಮಾತ್ರ ಪಾಲಿಸಬೇಕು: ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

ಒಳ್ಳೆಯದನ್ನು ಮಾತ್ರ ಪಾಲಿಸಬೇಕು: ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Date:

ಉಡುಪಿ, ನ.21: ಹಿಂದೂ ಸನಾತನ ಧರ್ಮ ಬಹಳ ಶ್ರೇಷ್ಠ ಧರ್ಮ. ಎಲ್ಲಾ ಧರ್ಮಗಳಂತೆ ಒಳ್ಳೆಯದನ್ನೇ ಹೇಳಿದೆ. ನಾವೆಲ್ಲರೂ ಒಳ್ಳೆಯದನ್ನು ಮಾತ್ರ ಪಾಲಿಸಬೇಕು. ಎಲ್ಲಾ ಧರ್ಮಗಳನ್ನು ಪ್ರೀತಿಸಬೇಕು, ಗೌರವಿಸಬೇಕು ಎಂದು ಜೈನ ಮುನಿ ಮೂಡಬಿದ್ರೆಯ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.

ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ್ ಶೆಣೈ ಅವರು ಉಡುಪಿಯ ತೆಂಕಪೇಟೆಯಲ್ಲಿ ಆಯೋಜಿಸಿದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಸಮಾಜ ಸೇವೆ ಸಲ್ಲಿಸಿದ ಶ್ರೀನಿವಾಸ ಕಾಮತ್, ಜನಾರ್ಧನ್ ಮತ್ತು ಉಮೇಶ್ ಅವರನ್ನು ಸ್ವಾಮೀಜಿಯವರು ಗೌರವಿಸಿದರು.

ರಾಜ್ಯ ಮತ್ತು ಜಿಲ್ಲಾ ಪತ್ರಕರ್ತರ ಸಂಘಟನೆಗೆ ಆಯ್ಕೆಯಾದ ಆಸ್ಟ್ರೋ ಮೋಹನ್, ಜನಾರ್ಧನ ಕೊಡವೂರು, ಮೋಹನ್ ಹಂದಾಡಿ ಅವರನ್ನು ಸ್ವಾಮೀಜಿಯವರು ಗೌರವಿಸಿದರು. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ನಿರೂಪಿಸಿದರು. ರವಿರಾಜ್ ಹೆಚ್‍.ಪಿ. ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!