Wednesday, July 29, 2026
Wednesday, July 29, 2026

ಪ್ರಧಾನಿ ಭೇಟಿ ಹಿನ್ನೆಲೆ, ದುರಸ್ಥಿ ಕಾರ್ಯ ತಾತ್ಕಾಲಿಕ ಸ್ಥಗಿತ

ಪ್ರಧಾನಿ ಭೇಟಿ ಹಿನ್ನೆಲೆ, ದುರಸ್ಥಿ ಕಾರ್ಯ ತಾತ್ಕಾಲಿಕ ಸ್ಥಗಿತ

Date:

ಉಡುಪಿ, ನ.25: ಸನ್ಮಾನ್ಯ ಭಾರತದ ಪ್ರಧಾನ ಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವ ಸಂದರ್ಭದಲ್ಲಿ ನಿಯಮಾನುಸಾರ ಶಿಷ್ಟಾಚಾರವನ್ನು ಪಾಲಿಸಬೇಕಾಗಿರುವ ಹಿನ್ನೆಲೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ಸೆಕ್ಷನ್ 163 ರನ್ವಯ ಈ ಕೆಳಗಿನಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿರುತ್ತಾರೆ. ಉಡುಪಿ ನಗರ ವ್ಯಾಪ್ತಿಯೊಳಗಿನ ಎನ್.ಹೆಚ್-66 ಮತ್ತು ಸಂಪರ್ಕ ರಸ್ತೆಗಳ ಮೇಲೆ ನಡೆಯುತ್ತಿರುವ ಎಲ್ಲಾ ಭೂಮಿ ಅಗೆಯುವ, ಕೊರೆಯುವ, ತೋಡುವ ಹಾಗೂ ಗುಂಡಿ ತೋಡುವ ಕೆಲಸಗಳನ್ನು ತಕ್ಷಣವೇ ನಿಲ್ಲಿಸಬೇಕು. ಈ ನಿರ್ಬಂಧ ಆದೇಶವು ನ. 28 ರ ಸಂಜೆ 5 ರ ವರೆಗೆ ಜಾರಿಯಲ್ಲಿರುತ್ತದೆ. ತುರ್ತು ಪರಿಸ್ಥಿತಿಗಳಲ್ಲಿ ಕಾರ್ಯ ನಿರ್ವಹಿಸಬೇಕಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಈ ಆದೇಶವನ್ನು ಎನ್.ಹೆಚ್ ವಿಭಾಗೀಯ ಅಧಿಕಾರಿಗಳು, ಪಿ.ಡಬ್ಲೂ.ಡಿ, ಪಿ.ಆರ್.ಇ.ಡಿ, ನಗರಸಭೆ, ಬಿ.ಎಸ್.ಎನ್.ಎಲ್ ಅಧಿಕಾರಿಗಳು ಮತ್ತು ಇತರ ಸಂಬಂಧಿತ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕು. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!