ಉಡುಪಿ, ನ.26: ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ನಡೆಯುತ್ತಿರುವಂತಹ ಕೋಟಿ ಗೀತಾ ಲೇಖನ ಯಜ್ಞದ ಪ್ರಯುಕ್ತ 28.11.2025 ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿ ಶ್ರೀ ಕೃಷ್ಣನ ಸನ್ನಿಧಾನಕ್ಕೆ ಆಗಮಿಸಿ, ಭಕ್ತ ಸಮೂಹದೊಂದಿಗೆ ಗೀತಾ ಪಾರಾಯಣವನ್ನು ನಡೆಸಿ ಶ್ರೀಕೃಷ್ಣನಿಗೆ ಸಮರ್ಪಿಸಲಿದ್ದಾರೆ. ಆದುದರಿಂದ ಸಾರ್ವಜನಿಕರಿಗೆ ದಿನಾಂಕ 28.11.2025 ರಂದು ಬೆಳಿಗ್ಗೆ 8:00 ಯಿಂದ 15 ಗಂಟೆಯವರೆಗೆ ಶ್ರೀ ಕೃಷ್ಣ ಮಠಕ್ಕೆ ಯಾವುದೇ ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಿಲಾಗಿದೆ. ಸಾರ್ವಜನಿಕರು ಈ ಸೂಚನೆಯನ್ನು ಗಮನಿಸಿ ಸಹಕರಿಸಬೇಕಾಗಿ ಶ್ರೀಮಠದ ಪ್ರಕಟಣೆ ತಿಳಿಸಿದೆ.
ಪ್ರಧಾನಿ ಮೋದಿ ಆಗಮನ; ನ. 28 ರಂದು ಬೆಳಿಗ್ಗೆ 8 ರಿಂದ 3 ಗಂಟೆಯವರೆಗೆ ಶ್ರೀ ಕೃಷ್ಣ ಮಠಕ್ಕೆ ಭಕ್ತರ ಪ್ರವೇಶ ನಿರ್ಬಂಧ
ಪ್ರಧಾನಿ ಮೋದಿ ಆಗಮನ; ನ. 28 ರಂದು ಬೆಳಿಗ್ಗೆ 8 ರಿಂದ 3 ಗಂಟೆಯವರೆಗೆ ಶ್ರೀ ಕೃಷ್ಣ ಮಠಕ್ಕೆ ಭಕ್ತರ ಪ್ರವೇಶ ನಿರ್ಬಂಧ
Date:




By
ForthFocus™