ಕೋಟ, ನ.30: ಪುರಾತನ ದೇಗುಲಗಳನ್ನು ಸ್ವಚ್ಛತೆಯ ಮೂಲಕ ಬೆಳಕಿಗೆ ತರುವ ಪಂಚವರ್ಣ ನಿರಂತರ ಸ್ವಚ್ಛತಾ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಹೇಳಿದರು.
ಅವರು, ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಮಣೂರು ಫ್ರೆಂಡ್ಸ್ , ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ ಇವರುಗಳ ಸಹಯೋಗದೊಂದಿಗೆ 281ನೇ ವಾರದ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕೋಟತಟ್ಟುವಿನ ಪುರಾತನ ಹಾಡಿ ಶ್ರೀ ವಿಷ್ಣುಮೂರ್ತಿ ದೇಗುಲ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಗುಲದ ಅರ್ಚಕರಾದ ಸುರೇಶ್ ಬಾಯರಿ, ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಸಂಚಾಲಕಿ ಸುಜಾತ ಬಾಯರಿ, ಉಪಾಧ್ಯಕ್ಷೆ ಪುಷ್ಭ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.




By
ForthFocus™