Wednesday, September 30, 2026
Wednesday, September 30, 2026

ಬೀದಿ ನಾಯಿಗಳ ಉಪಟಳ ತಡೆಯಲು ಸೂಕ್ತ ಕ್ರಮ ವಹಿಸಿ

ಬೀದಿ ನಾಯಿಗಳ ಉಪಟಳ ತಡೆಯಲು ಸೂಕ್ತ ಕ್ರಮ ವಹಿಸಿ

Date:

ಉಡುಪಿ, ನ.30: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರುಗಳು, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ, ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಪುರಸಭಾ ಮುಖ್ಯಾಧಿಕಾರಿಯವರಿಗೆ ತಿಳಿಸಬೇಕು.

ತಮ್ಮ ಸಂಸ್ಥೆಯ ಅವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂದಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು. ಮಾನ್ಯ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು. ಈ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಸಂಬಂಧಪಟ್ಟ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!