Wednesday, September 9, 2026
Wednesday, September 9, 2026

ಕಲೆ ಮತ್ತು ಸಂಸ್ಕೃತಿಯ ಕುರಿತು ಅರಿವು ಅಗತ್ಯ: ಎಂ.ಎ.ಗಫೂರ್

ಕಲೆ ಮತ್ತು ಸಂಸ್ಕೃತಿಯ ಕುರಿತು ಅರಿವು ಅಗತ್ಯ: ಎಂ.ಎ.ಗಫೂರ್

Date:

ಉಡುಪಿ, ನ.30: ಮನುಷ್ಯನ ಜೀವನ ಶೈಲಿಯು ಒತ್ತಡದೊಂದಿಗೆ ಸಾಗುತ್ತಿದ್ದು, ಕಲೆ ಸಂಸ್ಕೃತಿಯ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಾಗ ಮತ್ತು ಅದರಲ್ಲಿ ತೊಡಗಿಕೊಂಡಾಗ ಜೀವನದ ಬಗ್ಗೆ ವಿಶ್ವಾಸ, ವಿಶೇಷ ಪ್ರೀತಿ ಮೂಡಲು ಸಾಧ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಯಕ್ಷ ರಂಗಾಯಣ ಕಾರ್ಕಳ ವತಿಯಿಂದ ಕಾರ್ಕಳದ ಕೋಟಿ ಚೆನ್ನಯ ಥೀಂ ಆವರಣದಲ್ಲಿ ನಡೆದ ನಾಟಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರ ಜೊತೆಗೆ ಕಲಾವಿದರಿಗೆ ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದ ಸರಕಾರವು ಇಂತಹ ಕಾರ್ಯಕ್ರಮಗಳನ್ನು ಅಯೋಜಿಸಿದೆ. ಕಲೆ, ಸಾಹಿತ್ಯಕ್ಕೆ ಸಾಹಿತಿಗಳ ಕೊಡುಗೆ ಅಪಾರವಾಗಿದ್ದು, ಇತಿಹಾಸದ ಕುರಿತು ಅರಿವು ಮೂಡಿದಾಗ ಉತ್ತಮ ನಾಗರಿಕರಾಗಲು ಸಾಧ್ಯ ಎಂದರು.

ಕಾರ್ಕಳ ಯಕ್ಷ ರಂಗಾಯಣದ ನಿರ್ದೇಶಕ ಬಿ.ಆರ್. ವೆಂಕಟರಮಣ ಐತಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾರ್ಕಳ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ಪದ್ಮನಾಭ ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯಕ್ಷರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಕಾರ್ತಿಕ್ ನಿರೂಪಿಸಿ, ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಕಾರ್ಕಳ ಯಕ್ಷ ರಂಗಾಯಣದ ನಿರ್ದೇಶಕ ಬಿ.ಆರ್. ವೆಂಕಟರಮಣ ಐತಾಳ ನಿರ್ದೇಶನದ ಗುಲಾಮನ ಸ್ವಾತಂತ್ರ್ಯ ಯಾತ್ರೆ ನಾಟಕ ಪ್ರದರ್ಶನಗೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!