ಕಾಪು, ನ.30: ಪ್ರಧಾನಿ ನರೇಂದ್ರ ಮೋದಿಯವರು ಉಡುಪಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಾನಕ್ಕೆ ಆಗಮಿಸಿದಾಗ ವಿಶೇಷ ರಕ್ಷಣಾ ಗುಂಪಿನ ಮುಖ್ಯಸ್ಥ ಐಜಿ ಲವ್ ಕುಮಾರ್ ಅವರು ಕಾರ್ಯನಿರ್ವಹಿಸಿದ್ದು.
ಈ ವೇಳೆ ಕಾಪು ವೃತ್ತ ನಿರೀಕ್ಷಿಕ ಅಜ್ಮತ್ ಅಲಿ ಜಿ ಅವರೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.
ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.




By
ForthFocus™