Tuesday, July 28, 2026
Tuesday, July 28, 2026

ಕಾಪು: ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕಾಪು: ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

Date:

ಕಾಪು, ಡಿ.7: ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿಗೆ 1 ಕೋಟಿ 35 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಕಾಪು ಪುರಸಭೆಯ ಕಾಪು ಕೊಪ್ಪಲಂಗಡಿಯಿಂದ ಮಲ್ಲಾರು ಕೋಟೆ ರಸ್ತೆ ರೈಲ್ವೆ ಬ್ರಿಡ್ಜ್ ತನಕ ರಸ್ತೆ ಅಭಿವೃದ್ಧಿ 40 ಲಕ್ಷ, ಮಲ್ಲಾರು ರೈಲ್ವೆ ಬ್ರಿಡ್ಜ್ ನಿಂದ ಖಬರ್ ಸ್ಥಾನದ ವರೆಗೆ ರಸ್ತೆ ಅಭಿವೃದ್ಧಿ – 40 ಲಕ್ಷ, ಜನರಲ್ ಶಾಖೆ ವಾರ್ಡಿನ ಬೀಜ ಫ್ಯಾಕ್ಟರಿಯಿಂದ ನೂರ್ ಮೊಹಮ್ಮದ್ ಮತ್ತು ಅಜೀಂ ಮನೆಯಿಂದ ಸುಲೇಮಾನ್ ಮನೆ ತನಕ ರಸ್ತೆ ಅಭಿವೃದ್ಧಿ – 30 ಲಕ್ಷ, ಅಹಮದಿ ಮೊಹಲ್ಲಾ ರಸ್ತೆ ಅಭಿವೃದ್ಧಿ – 10 ಲಕ್ಷ, ಕೊಪ್ಪಲಂಗಡಿ ವಾರ್ಡಿನ ಅಲ್ಪಸಂಖ್ಯಾತರ ಕಾಲನಿ ರಸ್ತೆ ಅಭಿವೃದ್ಧಿ – 15 ಲಕ್ಷ ಸೇರಿದಂತೆ ಒಟ್ಟು 1 ಕೋಟಿ 35 ಲಕ್ಷ ರೂಪಾಯಿ ಅನುದಾನ ಒದಗಿಸಲಾಗಿದೆ.

ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಪುರಸಭೆಯ ಸದಸ್ಯರಾದ ಶೈಲೇಶ್ ಅಮೀನ್, ಉಮೇಶ್ ಕರ್ಕೇರ, ಮೋಹಿನಿ ಶೆಟ್ಟಿ, ನಾಗೇಶ್, ನೂರುದ್ದೀನ್, ಕಾಪು ಪುರಸಭೆಯ ಪ್ರಭಾರ ಮುಖ್ಯಾಧಿಕಾರಿಗಳಾದ ಶಶಿಕಲಾ ಮತ್ತು ಹೈದರ್, ಸುಧಾಮ ಶೆಟ್ಟಿ, ಗುತ್ತಿಗೆದಾರರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!