Thursday, July 30, 2026
Thursday, July 30, 2026

ಗ್ರಾಮಾಡಳಿತವೇ ಪ್ರಜಾಪ್ರಭುತ್ವದ ನೈಜ ತೊಟ್ಟಿಲು: ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ

ಗ್ರಾಮಾಡಳಿತವೇ ಪ್ರಜಾಪ್ರಭುತ್ವದ ನೈಜ ತೊಟ್ಟಿಲು: ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ

Date:

ಉಡುಪಿ, ಡಿ.7: ಪ್ರಜಾಪ್ರಭುತ್ವದ ಯಶಸ್ಸಿನ ಬೇರು ನಿಂತಿರುವುದೇ ಸ್ಥಳೀಯ ಆಡಳಿತ ಮೇಲೆ. ಸ್ಥಳೀಯ ಆಡಳಿತ ಯಶಸ್ವಿಯಾಗಬೇಕಾದರೆ ಎಲ್ಲಾ ವರ್ಗದ ಜನರ ಸಹಭಾಗಿತ್ವ ಸಹಕಾರ ಅತೀ ಅಗತ್ಯ. ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗಾಗಿಯೇ ಹಕ್ಕುಗಳ ಅರಿವು ಮೂಡಿಸುವ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆ ನಡೆಸುವುದು ಅತ್ಯಂತ ಔಚಿತ್ಯಪೂರ್ಣವಾದ ಮಾದರಿ ಕಾರ್ಯಕ್ರಮವೆಂದು ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.

17ನೇ ಚೇರ್ಕಾಡಿ ಗ್ರಾಮ ಪಂಚಾಯತ್ ವತಿಯಿಂದ ಶ್ರೀ ಶಾರದಾ ಹೈಸ್ಕೂಲಿನ ಪರಿಸರದಲ್ಲಿ ನಡೆದ ಮಕ್ಕಳ ಹಕ್ಕುಗಳ ವಿಶೇಷ ಅಧಿವೇಶನದಲ್ಲಿ ಸಂಪನ್ಮೂಲ ಉಪನ್ಯಾಸವಿತ್ತು ಅವರು ಮಾತನಾಡಿದರು.

ಸಮಾರಂಭದಲ್ಲಿ ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ನಾರಾಯಣ ನಾಯ್ಕ, ಉಪಾಧ್ಯಕ್ಷೆ ಪ್ರತಿಮಾ ಸುರೇಶ್, ಪೂರ್ಣಿಮಾ ಎಂ.ಎಸ್., ಅಂಗನವಾಡಿ ಮೇಲ್ವಿಚಾರಕಿ ಶಿಶು ಅಭಿವೃದ್ಧಿ ಯೇೂಜನಾಧಿಕಾರಿ ಕಛೇರಿ ಬ್ರಹ್ಮಾವರ, ಶ್ರೀನಾಥ್ ಮಾರ್ಗದರ್ಶಿ ಅಧಿಕಾರಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿತಾ, ಕಾರ್ಯದರ್ಶಿ ಉದಯ ಶೆಟ್ಟಿ, ಶ್ರೀ ಶಾರದಾ ಹೈಸ್ಕೂಲು ಮುಖ್ಯಸ್ಥ ಮಂಜುನಾಥ್ ನಾಯ್ಕ, ಗ್ರಾಮ ಪಂಚಾಯತ್ ಸದಸ್ಯರು, ಪೊಲೀಸ್ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಪೇೂಷಕರು, ಶಿಕ್ಷಕರು ಭಾಗವಹಿಸಿದ್ದರು.

ಪಂಚಾಯತ್ ಹಿರಿಯ ಸದಸ್ಯ ಚೇರ್ಕಾಡಿ ಹರೀಶ್ ಶೆಟ್ಟಿ ಕಾರ್ಯಕ್ರಮದ ಕುರಿತಾಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳೆ ಸಂಪೂರ್ಣವಾಗಿ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉಪಸ್ಥಿತರಿದ್ದ ಅಧಿಕಾರಿಗಳು ಉತ್ತರ ನೀಡಿದರು. ವಿದ್ಯಾರ್ಥಿಗಳಿಂದಲೇ ವಿದ್ಯಾರ್ಥಿಗಳಿಗಾಗಿ ನಡೆದ ಗ್ರಾಮ ಸಭೆ ಒಂದು ಮಾದರಿ ಕಾರ್ಯಕ್ರಮವಾಗಿ ಮೂಡಿಬಂತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!