Friday, March 20, 2026
Friday, March 20, 2026

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ಡಿ.8: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ ಹಾಗೂ ಚೇತನಾ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಹಾಗೂ ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಯೋಜನೆಗಳಡಿ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರು ಅರ್ಜಿಗಳನ್ನು ನಿಗದಿಪಡಿಸಿದ ಅವಧಿಯೊಳಗೆ, ಅಗತ್ಯ ದಾಖಲಾತಿಗಳೊಂದಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರಿಗೆ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಡಿಸೆಂಬರ್ 15 ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರದ ವಿವೇಚನಾ ಕೋಟಾ ಹಾಗೂ ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಜಿದಾರರು ಸಚಿವರು/ಶಾಸಕರು, ಕರ್ನಾಟಕ ಸರ್ಕಾರ/ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು, ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ ನಂ.204, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ:0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇನ್ಸ್ಪಾಯರ್ ಅವಾರ್ಡ್: ಸಂಜಿತ್ ಎಂ ದೇವಾಡಿಗ ಆಯ್ಕೆ

ಗಂಗೊಳ್ಳಿ, ಮಾ.20: ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಸೃಜನಶೀಲತೆ ಮತ್ತು ನವೀನ ಆಲೋಚನೆಗಳನ್ನು...

ಅಜೆಕಾರ್ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕಾರ್ಯಾರಂಭ

ಅಜೆಕಾರ್, ಮಾ.20: ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ (ರಿ) ಇದರ ಐದನೇ...

ಪಶ್ಚಿಮ ಏಷ್ಯಾ ಪ್ರದೇಶಗಳಿಗೆ ಇಂದಿನಿಂದ ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇವೆ ಆರಂಭ

ನವದೆಹಲಿ, ಮಾ.19: ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಇಂದಿನಿಂದ...
error: Content is protected !!