Saturday, July 25, 2026
Saturday, July 25, 2026

ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯ: ಅರ್ಜಿ ಆಹ್ವಾನ

ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯ: ಅರ್ಜಿ ಆಹ್ವಾನ

Date:

ಉಡುಪಿ, ಡಿ.10: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪ್ರಸಕ್ತ ಸಾಲಿನ ಯುವಬರಹಗಾರರು ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ 50 ಯುವಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000 ಗಳ ಪ್ರೋತ್ಸಾಹಧನ ನೀಡಲಾಗುವುದು. 18 ರಿಂದ 40 ವರ್ಷ ವಯೋಮಿತಿಯೊಳಗಿನ ಅರ್ಜಿದಾರರು ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ.ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ / ಸ್ನಾತಕೋತ್ತರ ಪದವಿಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳೊಂದಿಗಿನ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದ್ದರಿಂದ ತಮ್ಮ ಮೂಲ ಹಸ್ತಪ್ರತಿಯ ಒಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳಬೇಕು. ಅರ್ಜಿಗಳೊಂದಿಗೆ ಡಿ.ಟಿ.ಪಿ. ಮಾಡಿದ ಹಸ್ತಪ್ರತಿಯನ್ನು ಡಿಸೆಂಬರ್ 24 ರ ಸಂಜೆ 5.30 ರ ಒಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560002 ಇವರಿಗೆ ಕಳುಹಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002 ವೆಬ್‌ಸೈಟ್ http://www.kannadapustakapradhikara.com  ಅಥವಾ ದೂರವಾಣಿ ಸಂಖ್ಯೆ: 080- 22484516 / 22107704 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!