Sunday, July 26, 2026
Sunday, July 26, 2026

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಸ್ವಚ್ಛ ಮಾರ್ಗಂ ಸ್ವಚ್ಛತಾ ಅಭಿಯಾನ

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಸ್ವಚ್ಛ ಮಾರ್ಗಂ ಸ್ವಚ್ಛತಾ ಅಭಿಯಾನ

Date:

ಬೆಳ್ಮಣ್, ಡಿ.11: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ- ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಇದರ ಸಹಯೋಗದಲ್ಲಿ ಅಬ್ಬನಡ್ಕ – ಇಟ್ಟಮೇರಿ ಸಂಪರ್ಕ ರಸ್ತೆಯಿಂದ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಂಪರ್ಕಿಸುವ ರಸ್ತೆಯ ಇಕ್ಕೆಲಗಳಲ್ಲಿದ್ದ ಹುಲ್ಲು- ಗಿಡಗಂಟಿ-ಪೊದೆ ಕಡಿದು ಸ್ವಚ್ಛ ಮಾರ್ಗಂ ಕಾರ್ಯಕ್ರಮದ ಮೂಲಕ ಸ್ವಚ್ಛತಾ ಅಭಿಯಾಣ ನಡೆಸಲಾಯಿತು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅವರು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಕೋಶಾಧಿಕಾರಿ ಪ್ರದೀಪ್ ಸುವರ್ಣ ಕೆಮ್ಮಣ್ಣು, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಅಧ್ಯಕ್ಷರಾದ ಕೀರ್ತನ್ ಪೂಜಾರಿ, ಸದಸ್ಯರಾದ ವೀಣಾ ಪೂಜಾರಿ, ಸುಭಾಸ್ ಕೆಮ್ಮಣ್ಣು, ಕಿರಣ್ ಶೆಟ್ಟಿ, ಅಭಿಷೇಕ್ ಕುಲಾಲ್, ಮೊದಲಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!