Thursday, September 10, 2026
Thursday, September 10, 2026

ಗೋಕರ್ಣ ಪರ್ತಗಾಳಿ ಮಠಾಧೀಶರನ್ನು ಭೇಟಿಯಾದ ಭಾವೀ ಪರ್ಯಾಯ ಶೀರೂರು ಶ್ರೀಪಾದರು

ಗೋಕರ್ಣ ಪರ್ತಗಾಳಿ ಮಠಾಧೀಶರನ್ನು ಭೇಟಿಯಾದ ಭಾವೀ ಪರ್ಯಾಯ ಶೀರೂರು ಶ್ರೀಪಾದರು

Date:

ಪರ್ತಗಾಳಿ, ಡಿ.14: ಭಾವೀ ಪರ್ಯಾಯ ಪೀಠಾಧೀಶರಾದ ಹಾಗೂ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಹಾಗೂ ಪ್ರಸ್ತುತ ಪರ್ಯಾಯ ಪೂರ್ವಭಾವೀ ಸಂಚಾರದಲ್ಲಿರುವ ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೇವೊತ್ತಮ ಮಠ ಪರ್ತಗಾಳಿ ಗೋವ ಇಲ್ಲಿಗೆ ಭೇಟಿ ನೀಡಿದರು.

ಪರ್ತಗಾಳಿ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದರನ್ನು ಈ ಸಂದರ್ಭದಲ್ಲಿ ಭೇಟಿ ಮಾಡಿದರು. ಪರ್ತಗಾಳಿ ಶ್ರೀಪಾದರು ತಮ್ಮ ಪಟ್ಟದ ದೇವರ ದರ್ಶನ ಮಾಡಿಸಿದರು.

ಉಭಯ ಶ್ರೀಪಾದರು ಪರಸ್ಪರ ಗೌರವ ಸಮರ್ಪಣೆ ಹಾಗೂ ಶೀರೂರು ಶ್ರೀಪಾದರಿಗೆ ಪರ್ತಗಾಳಿ ಮಠದ ವತಿಯಿಂದ ಮಾಲಿಕೆ ಮಂಗಳಾರತಿ ಹಾಗೂ ಶೀರೂರು ಶ್ರೀಪಾದರಿಂದ ರಾತ್ರಿ ಪೂಜೆ ನಡೆಯಿತು. ಸಭಾ ಕಾರ್ಯಕ್ರಮ ನಡೆದು ಉಭಯ ಶ್ರೀಪಾದರು ಆಶೀರ್ವಚನ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!