ಕೋಟ, ಡಿ.15: ಕೋಡಿ ಕನ್ಯಾಣದಲ್ಲಿ ಶನೀಶ್ವರ ದೇಗುಲದ ಬಳಿ ಡಿ.21ರಂದು ನಡೆಯಲಿರುವ ತಿರುಪತಿ ಶ್ರೀ ದೇವರ ಉಂಜಲೋತ್ಸವ ನಡೆಯುವ ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಮಣೂರು ಫ್ರೆಂಡ್ಸ್ ಸಹಯೋಗದೊಂದಿಗೆ 283ನೇ ಪರಿಸರ ಸ್ನೇಹಿ ಸ್ವಚ್ಛತಾ ಅಭಿಯಾನದ ಮೂಲಕ ಹಮ್ಮಿಕೊಂಡಿತು. ಕೋಡಿ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಸಿ ಪಂಚವರ್ಣದ ಕಾರ್ಯ ಶ್ಲಾಘಿಸಿದರು.
ಕೋಡಿ ಶನೀಶ್ವರ ದೇಗುಲದ ಅಧ್ಯಕ್ಷ ಗೋಪಾಲ ಪೂಜಾರಿ, ಗ್ರಾಮದ ಪ್ರಮುಖರಾದ ರವಿ ಅಮೀನ್, ಉದಯ್ ಕಾಂಚನ್, ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷರಾದ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಸಂಚಾಲಕಿ ಸುಜಾತ ಬಾಯರಿ, ಕೋಡಿ ಹೊಸಬೇಂಗ್ರೆ ಅಂಗನವಾಡಿ ಕಾರ್ಯಕರ್ತೆ ಯಮುನಾ ಎಲ್ ಕುಂದರ್ ಮತ್ತಿತರರು ಇದ್ದರು. ಕಾರ್ಯಕ್ರಮವನ್ನು ಪ್ರಶಾಂತ್ ಪಡುಕರೆ, ರವೀಂದ್ರ ಕೋಟ ಸಂಯೋಜಿಸಿದರು.




By
ForthFocus™