Saturday, November 21, 2026
Saturday, November 21, 2026

ಡಿ.26-28: ಕಾಪು ಕಡಲ ಪರ್ಬ; ಬೀಚ್ ಉತ್ಸವ, ಅಹಾರ ಮೇಳ

ಡಿ.26-28: ಕಾಪು ಕಡಲ ಪರ್ಬ; ಬೀಚ್ ಉತ್ಸವ, ಅಹಾರ ಮೇಳ

Date:

ಕಾಪು, ಡಿ.16: ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26, 27, 28 ರಂದು ‘ಕಾಪು ಕಡಲ ಪರ್ಬ’ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ, ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವ ನಡೆಯಲ್ಲಿದ್ದು ಖ್ಯಾತ ಗಾಯಕರಾದ ರಘು ದೀಕ್ಷಿತ್, ಕುನಾಲ್ ಗಾಂಜಾವಾಲ ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಹಾಗೂ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೀವ್ರತರ ಅತಿಸಾರ ಭೇದಿ ನಿಯಂತ್ರಣ ಅಭಿಯಾನ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ...

‘ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಪಾತ್ರ’ -ಒಂದು ದಿನದ ತರಬೇತಿ ಕಾರ್ಯಾಗಾರ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,...

ಶಾಸ್ತ್ರೀಯ ಶಿಸ್ತು ಜಾನಪದ ಸ್ವಾತಂತ್ರ‍್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಪ್ರೊ. ಎಂ.ಎಲ್. ಸಾಮಗ

ಉಡುಪಿ, ನ.20: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು...

ಸರಸ್ವತಿ ವಿದ್ಯಾಲಯ: ಕನ್ನಡ ಸಿರಿ ಕಾರ್ಯಕ್ರಮ

ಗಂಗೊಳ್ಳಿ, ನ.20: ಒಂದು ಭಾಷೆ ಬೆಳೆಯಲು ವಿವಿಧ ಭಾಷೆಗಳ ನಡುವೆ ಸಮನ್ವಯ...
error: Content is protected !!