Monday, October 19, 2026
Monday, October 19, 2026

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ವಿಧಾನಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ವಿಧಾನಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ

Date:

ಉಡುಪಿ, ಡಿ.17: ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಭರವಸೆ ನೀಡಿದರು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕುಂದಾಪುರ ತಾಲೂಕಿನ ಇಎಸಐ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ಹುದ್ದೆಯನ್ನು ಮಂಜೂರು ಮಾಡಲಾಗಿತ್ತು. ಆದರೆ 2015 ರಿಂದ ಒಬ್ಬರೇ ಒಬ್ಬರು ಖಾಯಂ ವೈದ್ಯರು ಇಲ್ಲ. ಬೇರೆ ಕಡೆಯಿಂದ ನಿಯೋಜನೆ ಮೇರೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಾರೆ. ಇದರಿಂದ ಕಾರ್ಮಿಕರಿಗೆ ಸರಿಯಾದ ಚಿಕಿತ್ಸೆ ಸಿಗದೆ ತೊಂದರೆಯಾಗಿದೆ ಎಂದು ಕಿರಣ್ ಕುಮಾರ್ ಅವರು ಹೇಳಿದರು.

ಕುಂದಾಪುರದ ಇಎಸ್‌ಐ ಆಸ್ಪತ್ರೆಯಲ್ಲಿ ನಿಯೋಜನೆ ಮೇಲೆ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಖಾಯಂ ವೈದ್ಯರು ಬೇಕು ಎಂಬ ಬೇಡಿಕೆ ಬಗ್ಗೆ ಪರಿಶೀಲನೆ ಮಾಡಲಾಗುವುದು. ಮೂರು ವಾರದಲ್ಲಿ ತಾತ್ಕಾಲಿಕ ವೈದ್ಯರ ನೇಮಕ ಮಾಡಲಾಗುವುದು ಎಂದು ಹೇಳಿದರು. ಆಸ್ಪತ್ರೆ ಹೆಸರು ಬಿಟ್ಟಿದ್ದರೆ ಕ್ರಮ: ಇಎಸ್‌ಐ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳ ಪಟ್ಟಿಯಲ್ಲಿ ಮಣಿಪಾಲದ ಕಸ್ತೂರರ್ಬಾ ಆಸ್ಪತ್ರೆ ಹಾಗೂ ಕುಂದಾಪುರದ ಆದರ್ಶ ಆಸ್ಪತ್ರೆ ಬಿಟ್ಟು ಹೋಗಿದೆ ಎಂಬ ಕಿರಣ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್ ಅವರು, ಕಸ್ತೂರಬಾ, ಆದರ್ಶ ಆಸ್ಪತ್ರೆ ಬಿಟ್ಟು ಹೋಗಿದ್ದರೆ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾರ್ಮಿಕ ಸಚಿವರಿಗೆ ಧನ್ಯವಾದ :ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆ ಅವಧಿಯನ್ನು ಎರಡು ವರ್ಷಕ್ಕೆ ವಿಸ್ತರಿಸಿದ್ದಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕಿರಣ್ ಕುಮಾರ್ ಅವರು ಧನ್ಯವಾದಗಳನ್ನು ತಿಳಿಸಿದರು. ಈ ಬಗ್ಗೆ ಸಚಿವರಿಗೆ ಕಿರಣ್ ಕುಮಾರ್ ಅವರು ಮನವಿ ಮಾಡಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!