Sunday, February 8, 2026
Sunday, February 8, 2026

ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಬರಬೇಕು: ಡಾ.ಕೃಷ್ಣ ಕಾಂಚನ್

ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಬರಬೇಕು: ಡಾ.ಕೃಷ್ಣ ಕಾಂಚನ್

Date:

ಕೋಟ, ಡಿ.18: ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಧುಮುಕಬೇಕು ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್ ಹೇಳಿದರು. ಮಂಗಳವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ ಇವರ ಸಹಯೋಗದೊಂದಿಗೆ ೫೦ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆ.ಎಂ.ಎಫ್ ನಿರ್ದೇಶಕ ಶಿವಮೂರ್ತಿ ಕೆ ಮಾತನಾಡಿ, ಜೈ ಜವಾನ್ ಜೈ ಕಿಸಾನ್ ಎಂಬ ಧ್ಯೇಯೋಕ್ತಿ ಬಾಯಲ್ಲಿ ಇದ್ದರೆ ಸಾಲದು. ಅದರ ನೈಜ ಅನುಷ್ಠಾನದ ಬಗ್ಗೆ ಚಿಂತಿಸುವ ಅಗತ್ಯತೆ ಇದೆ ಎಂದರು. ರೈತ ಪುರಸ್ಕಾರವನ್ನು ಕೋಟತಟ್ಟು ಪಡುಕರೆಯ ಕೇರ್ಜುಮನೆ ಚಂದ್ರ ಪೂಜಾರಿ ಇವರಿಗೆ ನೀಡಲಾಯಿತು. ಪ್ರಾರಂಭದಲ್ಲಿ ಗೋ ಪೂಜೆ ನೆರವೇರಿಸಲಾಯಿತು.

ಪ್ಲಾಸ್ಟಿಕ್ ಮುಕ್ತ ಜಾಗೃತಿಯ ಅನುಷ್ಠಾನಕ್ಕಾಗಿ ಬೆಂಗಳೂರಿನ ಕ್ಯಾಪ್ಸ್ ಫೌಂಡೇಶನ್ ಕೊಡ ಮಾಡಿದ ಬಟ್ಟೆ ಚೀಲಗಳನ್ನು ಸಭೆಯಲ್ಲಿ ನೀಡಿ ಜಾಗೃತಿ ಮೂಡಿಸಲಾಯಿತು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟಿ ಚೆನ್ನಯ್ಯ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಿದ್ಧಿ ಶ್ರೀನಿವಾಸ ಪೂಜಾರಿ, ವಡ್ಡರ್ಸೆ ಗ್ರಾಮ ಪಂಚಾಯತ್ ಸದಸ್ಯ ಕೋಟಿ ಪೂಜಾರಿ, ಶ್ರೀನಿಧಿ ಫ್ರೆಂಡ್ಸ್ ಅಧ್ಯಕ್ಷ ಚಂದ್ರ ಪುತ್ರನ್, ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ ಜಯರಾಮ ಶೆಟ್ಟಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಉಪಸ್ಥಿತರಿದ್ದರು. ಪಂಚವರ್ಣ ಯುವಕ ಮಂಡಲದ ಸಲಹಾ ಸಮಿತಿಯ ಅಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿ ಸಂಯೋಜಿಸಿದರು. ಸದಸ್ಯೆ ಗೀತಾ ಶಿವರಾಂ ಸನ್ಮಾನ ಪತ್ರ ವಾಚಿಸಿದರು. ಮಹಿಳಾ ಮಂಡಲದ ಸಂಚಾಕಿ ಸುಜಾತ ಬಾಯರಿ ನಿರೂಪಿಸಿದರು. ಸದಸ್ಯೆ ಶ್ಯಾಮಲ ಸಿ ಪುತ್ರನ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!