Sunday, February 8, 2026
Sunday, February 8, 2026

ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

Date:

ಉಡುಪಿ, ಡಿ.18: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಒಟ್ಟು 2 ದೇವಸ್ಥಾನಗಳಿಗೆ ಮತ್ತು ಈಗಾಗಲೇ ರಚನೆಗೊಂಡಿರುವ 2 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಒಂದು ಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ ಸಿ ದೇವಸ್ಥಾನಗಳ ವಿವರ: ಕುಂದಾಪುರ ತಾಲೂಕು ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಉಪ್ಪಿನಕುದ್ರು, ಶ್ರೀ ಶಾಂತೇಶ್ವರ ದೇವಸ್ಥಾನ ಹೊಸಂಗಡಿ.

ಮರುಪ್ರಕಟಣೆ ಹೊರಡಿಸಲಾದ ದೇವಸ್ಥಾನಗಳ ವಿವರ: ಉಡುಪಿ ತಾಲೂಕು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪೆರಂಪಳ್ಳಿ, ಶಿವಳ್ಳಿ(ಸಾಮಾನ್ಯ ವರ್ಗದ ಒಂದು ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ) ಕುಂದಾಪುರ ತಾಲೂಕು ಶ್ರೀ ಬೆಳವಿನಮಕ್ಕಿ ಶ್ರೀ ಮಹಾಗಣಪತಿ ದೇವಸ್ಥಾನ ಸೇನಾಪುರ(ಸಾಮಾನ್ಯ ವರ್ಗದ ಒಂದು ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ) ಕಾಪು ತಾಲೂಕು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಳತ್ತೂರು (ಸಾಮಾನ್ಯ ವರ್ಗದ ಒಂದು ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ). ಕನಿಷ್ಠ 25 ವರ್ಷ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಿಗದಿತ ನಮೂನೆ-1(ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 30 ರ ಒಳಗಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!