Monday, September 28, 2026
Monday, September 28, 2026

ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್

ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್

Date:

ಉಡುಪಿ, ಡಿ.18: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಯೋಜಿತ ಯೋಜನೆಗಳಡಿ ಆಯ್ಕೆಯಾಗಿ ಆರ್ಥಿಕ ನೆರವು ನೀಡಲು ಶಿಫಾರಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ಜನರಿಗೆ ಅನುಕೂಲವಾಗುವಂತೆ ಸರಳ ರೀತಿಯಲ್ಲಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಈವರೆಗೆ 5661 ಅರ್ಜಿಗಳು ಸ್ವೀಕೃತವಾಗಿದ್ದು, 1337 ಅರ್ಜಿಗಳು ತಿರಸ್ಕೃತಗೊಂಡು, 3937 ಫಲಾನುಭವಿಗಳಿಗೆ 35.29 ಕೋಟಿ ರೂ. ಸಾಲ ವಿತರಿಸಲಾಗಿದೆ. ತಿರಸ್ಕೃತ ಅರ್ಜಿಗಳ ಸಂಖ್ಯೆ ಕಡಿಮೆಯಾಗಬೇಕು ಎಂದ ಅವರು, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮ ವಹಿಸಬೇಕು ಎಂದರು.

ಜಿಲ್ಲೆಯ ಉದ್ಯಮಿಗಳಿಗೆ ಜೀವನೋಪಾಯದ ಚಟುವಟಿಕೆಗಳನ್ನು ನಿರ್ಮಿಸಲು ಹಾಗೂ ಜಿಲ್ಲೆಯ ಉದ್ಯಮಿಗಳನ್ನು ಬೆಂಬಲಿಸುವುದರೊಂದಿಗೆ ಉದ್ಯೋಗಾವಕಾಶ ಸೃಷ್ಠಿಸಲು ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ 129 ನಿಗಧಿತ ಗುರಿಗೆ, 91 ಜನ ಫಲಾನುಭವಿಗಳಿಗೆ 10.06 ಕೋಟಿ ಆರ್ಥಿಕ ನೆರವು ವಿತರಿಸಲಾಗಿದೆ. ಯಾವುದೇ ಯೋಜನೆಗಳಡಿ ಅರ್ಜಿ ಸಲ್ಲಿಕೆಯಾದಾಗ ಅರ್ಜಿಗಳನ್ನು ಬಾಕಿ ಉಳಿಸದೇ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಬೇಕು ಎಂದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಆದ್ಯತೆಯ ಮತ್ತು ಆದ್ಯತೆಯೇತರ ವಲಯಗಳೆರಡಕ್ಕೂ ಒಟ್ಟಾರೆಯಾಗಿ 15,514.16 ಕೋಟಿ ರೂ.ಗಳ ವಾರ್ಷಿಕ ಕ್ರೆಡಿಟ್ ಯೋಜನೆ ಗುರಿಯನ್ನು ನಿಗದಿಪಡಿಸಲಾಗಿದ್ದು, ಈವರೆಗೆ 8,941.11 ಗುರಿ ಸಾಧಿಸಿ, ಶೇ. 57.63 ಸಾಧನೆ ಮಾಡಲಾಗಿದೆ ಎಂದ ಅವರು, ಕೃಷಿ ವಲಯಕ್ಕೆ 4230 ನಿಗಧಿತ ಗುರಿಗೆ 2274 ಗುರಿ ಸಾಧಿಸಿ ಶೇ. 53.76, ಎಂ.ಎಸ್.ಎಂ.ಇ ವಲಯಕ್ಕೆ 3713 ಗುರಿ ನಿಗಧಿಪಡಿಸಲಾಗಿದ್ದು, 2426 ಗುರಿ ಸಾಧಿಸಿ ಶೇ. 65.35 ರಷ್ಟು, ಶಿಕ್ಷಣ ವಲಯಕ್ಕೆ 187 ನಿಗಧಿತ ಗುರಿಗೆ 116 ಗುರಿ ಸಾಧಿಸಿ ಶೇ. 62.12 ರಷ್ಟು, ವಸತಿ ಕ್ಷೇತ್ರಗಳಿಗೆ 510 ನಿಗಧಿತ ಗುರಿಗೆ 111 ಗುರಿ ಸಾಧಿಸಿ ಶೇ. 21.85 ರಷ್ಟು, ಇತರೆ ಕ್ಷೇತ್ರಗಳಿಗೆ 399 ನಿಗಧಿತ ಗುರಿಗೆ, 194 ಗುರಿ ಸಾಧಿಸಿ ಶೇ. 48.46 ಹಾಗೂ ಆದ್ಯತೇತರ ವಲಯಗಳಿಗೆ 6474 ನಿಗಧಿತ ಗುರಿಗೆ, 3819 ಗುರಿ ಸಾಧಿಸಿ ಶೇ. 58.99 ರಷ್ಟು ಸಾಧನೆ ಮಾಡಲಾಗಿದೆ ಎಂದರು.

ಬೆಂಗಳೂರು ಆರ್.ಬಿ.ಐ ಎಫ್.ಐ.ಡಿ.ಡಿ ಲೀಡ್ ಡಿಸ್ಟ್ರಿಕ್ಟ್ ಆಫೀಸರ್ ನಿಶಾ ಠಾಕೂರ್, ಮಾತನಾಡಿ, ಆರ್.ಬಿ.ಐ ನಿಯಮಾನುಸಾರ ಜಿಲ್ಲೆಗಳ ಸಿ.ಡಿ ಅನುಪಾತವು ಶೇ. 50 ಕ್ಕಿಂತ ಕಡಿಮೆ ಇರಬಾರದು. ಇದನ್ನು ಹೆಚ್ಚಿಸಲು ಎಲ್ಲಾ ಬ್ಯಾಂಕ್‌ಗಳ ಅಧಿಕಾರಿಗಳೂ ಕಾರ್ಯಪ್ರವೃತ್ತರಾಗಬೇಕು ಎಂದರು.

ಕೆನರಾ ಬ್ಯಾಂಕ್ ರೀಜನಲ್ ಮ್ಯಾನೆಜರ್ ಮಹಾಮಾಯ ಪ್ರಸಾದ್ ರಾಯ್ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಬ್ಯಾಂಕಿಂಗ್ ಠೇವಣಿ ಅನುಪಾತವು ಶೇ.47.66 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.48.62 ರಷ್ಟಾಗಿ ಶೇ. 0.96 ರಷ್ಟು ಏರಿಕೆಯಾಗಿದೆ. ಸಿ.ಡಿ ಅನುಪಾತದಲ್ಲಿ ಜಿಲ್ಲೆಯು ಶೇ. 50 ಕ್ಕಿಂತ ಕಡಿಮೆ ಇರುವುದು ವಿಷಾಧನೀಯವಾಗಿದ್ದು, ಮುಂದಿನ ದಿನಗಳಲ್ಲಿ ಸಿ.ಡಿ ಅನುಪಾತ ಹೆಚ್ಚಿಸಲು ಎಲ್ಲಾ ಬ್ಯಾಂರ‍್ಸ್ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಸಭೆಯಲ್ಲಿ ನಬಾರ್ಡ್ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕುಗಳ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!