Wednesday, September 30, 2026
Wednesday, September 30, 2026

ಕೆ.ಎಂ.ಸಿ ಮಣಿಪಾಲ- ಮಕ್ಕಳ ರಕ್ತಶಾಸ್ತ್ರ ಕುರಿತು ರಾಷ್ಟ್ರೀಯ ತರಬೇತಿ ಕಾರ್ಯಾಗಾರ

ಕೆ.ಎಂ.ಸಿ ಮಣಿಪಾಲ- ಮಕ್ಕಳ ರಕ್ತಶಾಸ್ತ್ರ ಕುರಿತು ರಾಷ್ಟ್ರೀಯ ತರಬೇತಿ ಕಾರ್ಯಾಗಾರ

Date:

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್‌ನ ಮತ್ತು ಪೀಡಿಯಾಟ್ರಿಕ್ ಹೆಮಟಾಲಜಿ ಆಂಡ್ ಆಂಕೊಲಾಜಿ ಸಹಯೋಗದೊಂದಿಗೆ ಮಣಿಪಾಲದಲ್ಲಿ ಪ್ರಾಯೋಗಿಕವಾಗಿ ಮಕ್ಕಳ ರಕ್ತಶಾಸ್ತ್ರ ಕುರಿತು ರಾಷ್ಟ್ರೀಯ ತರಬೇತಿ ಕಾರ್ಯಾಗಾರ ನಡೆಯಿತು.

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಶರತ್ ಕುಮಾರ್ ರಾವ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ, ಈ ಕಾರ್ಯಾಗಾರವು ಮಕ್ಕಳ ವೈದ್ಯರಿಗೆ ಮತ್ತು ಮಕ್ಕಳ ವೈದ್ಯಶಾಸ್ತ್ರದಲ್ಲಿ ತರಬೇತಿ ಪಡೆಯುತ್ತಿರುವವರಿಗೆ ರಕ್ತಶಾಸ್ತ್ರದ ಬಗ್ಗೆ ತಮ್ಮ ಜ್ಞಾನವನ್ನು ಕಲಿಯಲು ಮತ್ತು ನವೀಕರಿಸಲು ಅನುವು ಮಾಡಿಕೊಡುತ್ತದೆ
ಎಂದು ಹೇಳಿದರು.

ಕಾರ್ಯಾಗಾರಕ್ಕೆ ಗೌರವ ಅತಿಥಿಯಾಗಿ ಆಗಮಿಸಿ ಮಾತನಾಡಿದ ಉಡುಪಿ ಜಿಲ್ಲಾ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ ನ ಅಧ್ಯಕ್ಷರಾದ ಡಾ. ಶಶಿಧರ್‌ ಎಸ್ ಬಿ ಮಾತನಾಡುತ್ತಾ, ಈ ರೀತಿಯ ಕಾರ್ಯಾಗಾರಗಳು ಮಕ್ಕಳ ವೈದ್ಯರ ಜ್ಞಾನವನ್ನು ಮತ್ತಷ್ಟು ಹೆಚ್ಚಿಸುತ್ತದೆ ಮತ್ತು ಮಕ್ಕಳನ್ನು ಬೇಗನೇ ವಿಶೇಷ ತಜ್ಞರ ಬಳಿ ಕಳುಹಿಸಿ ಉತ್ತಮ ಚಿಕಿತ್ಸಾ ಆರೈಕೆಗೆ ಅನುವು ಮಾಡಿಕೊಡುತ್ತದೆ ಎಂದು ಅಭಿಪ್ರಾಯಪಟ್ಟರು.

ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲೋಜಿ ವಿಭಾಗದ ಸಹಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ವಾಸುದೇವ ಭಟ್ ಕಾರ್ಯಾಗಾರದ ಕುರಿತು ಅವಲೋಕನ ನೀಡಿದರು.

ಸಹಾಯಕ ಪ್ರಾಧ್ಯಾಪಕರಾದ ಡಾ. ಅರ್ಚನಾ ಎಂ.ವಿ ಸ್ವಾಗತಿಸಿ ಮತ್ತು ಡಾ. ವಿನಯ್ ಎಂ.ವಿ ವಂದಿಸಿದರು.

ಕಾರ್ಯಾಗಾರದಲ್ಲಿ ಸುಮಾರು ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು ಮತ್ತು ಮಕ್ಕಳ ರಕ್ತಶಾಸ್ತ್ರದ ವಿವಿಧ ವಿಷಯಗಳ ಕುರಿತು ವ್ಯಾಪಕ ಚರ್ಚೆ ನಡೆಸಿದರು.

ಭಾರತದ ಪ್ರತಿಷ್ಠಿತ ಸಂಸ್ಥೆಗಳಾದ ಸರ್ ಗಂಗಾ ರಾಮ್ ಆಸ್ಪತ್ರೆ-ದೆಹಲಿ, ಸಿಎಂಸಿ-ವೆಲ್ಲೂರು ಮತ್ತು ಸೇಂಟ್ ಜಾನ್ಸ್ ಆಸ್ಪತ್ರೆ-ಬೆಂಗಳೂರು ಮುಂತಾದ ಸಂಸ್ಥೆಗಳಿಂದ ತಜ್ಞರು ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!