ನವದೆಹಲಿ, ಡಿ.18: ಉಡುಪಿ, ಮಂಗಳೂರು, ಮಲೆನಾಡು, ಗಡಿನಾಡು ಕಾಸರಗೋಡು ಸೇರಿದಂತೆ ಕರಾವಳಿ ಭಾಗದಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಲಕ್ಷಾಂತರ ಭಕ್ತರು ತೆರಳುತ್ತಾರೆ. ಹೀಗಾಗಿ ಮಂಗಳೂರು ವಿಮಾನ ನಿಲ್ದಾಣದಿಂದ ತಿರುಪತಿಗೆ ನೇರವಾಗಿ ವಿಮಾನ ಸೇವೆಯನ್ನು ಒದಗಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ವಿಮಾನಯಾನ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಮನವಿಯನ್ನು ಪುರಸ್ಕರಿಸಿದ ಸಚಿವರು ಶೀಘ್ರವಾಗಿ ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಮಂಜುನಾಥ್ ಉಪಸ್ಥಿತರಿದ್ದರು.
ಮಂಗಳೂರಿನಿಂದ ತಿರುಪತಿಗೆ ನೇರ ವಿಮಾನ ಸೇವೆ ಆರಂಭಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ
ಮಂಗಳೂರಿನಿಂದ ತಿರುಪತಿಗೆ ನೇರ ವಿಮಾನ ಸೇವೆ ಆರಂಭಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ
Date:




By
ForthFocus™