Saturday, January 17, 2026
Saturday, January 17, 2026

ಉಡುಪಿಯಲ್ಲಿ ಕೌಶಲ್ಯ ರಥ

ಉಡುಪಿಯಲ್ಲಿ ಕೌಶಲ್ಯ ರಥ

Date:

ಬೆಳಗಾವಿ, ಡಿ.19: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಕೌಶಲ್ಯ ರಥ ಕಾರ್ಯಕ್ರಮವನ್ನು ರಾಯಚೂರು, ಯಾದಗಿರಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗಿರುತ್ತದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ಹೇಳಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರಗಳಲ್ಲಿ ಕೌಶಲ್ಯ ತರಬೇತಿ ಕೇಂದ್ರಗಳಿಗೆ ತಾಲ್ಲೂಕು ಹಾಗೂ ಅತಿ ಹಿಂದುಳಿದ ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿಯನ್ನು ಪಡೆಯಲು ಪೂರಕವಾಗುವಂತೆ ಅವರಿರುವ ಸ್ಥಳಕ್ಕೆ ತೆರಳಿ ತರಬೇತಿ ನೀಡುವ ಸಂಬಂಧ ಸ್ಕಿಲ್ಸ್ ಆನ್ ವೀಲ್ಸ್ (ಕೌಶಲ್ಯ ರಥ / ನೈಪುಣ್ಯ ರಥ) ವಿನೂತನ ಯೋಜನೆಯನ್ನು ಅನುಷ್ಠಾನಗೊಳಿಸಿದೆ.

ರಾಜ್ಯದ ಗ್ರಾಮೀಣ ಯುವಜನರಿಗೆ ಅಲ್ಪಾವಧಿ ಕೌಶಲ್ಯಾಧಾರಿತ ತರಬೇತಿಯೊಂದಿಗೆ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ.

2022-23ನೇ ಸಾಲಿನಲ್ಲಿ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ತಲಾ 75 ಅಭ್ಯರ್ಥಿಗಳಿಗೆ ಅನುಕ್ರಮವಾಗಿ ಅಸಿಸ್ಟಂಟ್ ಬ್ಯೂಟಿ ಥೆರಪಿಸ್ಟ್ ಅಂಡ್ ಅಸಿಸ್ಟಂಟ್ ಎಲೆಕ್ಟ್ರಿಷಿಯನ್ ಜಾಬ್ ರೋಲ್ ನಡಿ ಹಾಗೂ 2023-24ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 45 ಅಭ್ಯರ್ಥಿಗಳು ಮತ್ತು ಉಡುಪಿ ಜಿಲ್ಲೆಯಲ್ಲಿ 60 ಅಭ್ಯರ್ಥಿಗಳಿಗೆ ಅನುಕ್ರಮವಾಗಿ ಅಸಿಸ್ಟಂಟ್ ಎಲೆಕ್ಟ್ರಿಷಿಯನ್ ಅಂಡ್ ಅಸಿಸ್ಟಂಟ್ ಬ್ಯೂಟಿ ಥೆರಪಿಸ್ಟ್ ಜಾಬ್ ರೋಲ್‌ನಡಿ ತರಬೇತಿಯನ್ನು ನೀಡಲಾಗಿದೆ ಎಂದು ಸಚಿವರು ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!