Saturday, October 17, 2026
Saturday, October 17, 2026

ಕೊರಗ ಸಮುದಾಯ ಅಹೋರಾತ್ರಿ ಧರಣಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಕೊರಗ ಸಮುದಾಯ ಅಹೋರಾತ್ರಿ ಧರಣಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

Date:

ಉಡುಪಿ, ಡಿ.20: ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮುಂಭಾಗದಲ್ಲಿ ಕಳೆದ 6 ದಿನಗಳಿಂದ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿ ಒತ್ತಾಯಿಸಿ ಕೊರಗ ಸಮುದಾಯದ ವತಿಯಿಂದ ನಡೆಯುತ್ತಿರುವ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಭೇಟಿ ನೀಡಿ ಮನವಿ ಸ್ವೀಕರಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಮೂಲ ನಿವಾಸಿಗಳಾಗಿ ಗುರುತಿಸಿ ಕೊಂಡಿರುವ ಕೊರಗ ಸಮುದಾಯ ಅತ್ಯಂತ ಅತೀ ಹಿಂದುಳಿದ ಸಮಾಜವಾಗಿದ್ದು, ಸಮಾಜದ ಮುಖ್ಯವಾಹಿನಿಗೆ ಬರುವ ಉದ್ದೇಶದಿಂದ ಕೊರಗ ಸಮುದಾಯದ ಯುವ ಜನತೆ ಶಿಕ್ಷಣದ ಮೂಲಕ ಉತ್ತಮ ಸಾಧನೆ ಮಾಡಿದ್ದು ಪ್ರತಿಭಾವಂತ ಯುವ ಜನತೆಗೆ ಸರಕಾರಿ ಉದ್ಯೋಗ ನೇರ ನೇಮಕಾತಿ ಮಾಡಲು ರಾಜ್ಯ ಸರಕಾರ ಮುಂದಾಗ ಬೇಕಿದೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಇಲಾಖೆಯ ಸಚಿವರಿಗೆ ಪತ್ರ ಬರೆದು ಮನವಿ ಮಾಡುವುದಾಗಿ ಹೇಳಿದರು.

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ಅಧ್ಯಕ್ಷರಾದ ಸುಶೀಲ ನಾಡ, ಮುಖಂಡರಾದ ಶೇಖರ ಕೆಂಜೂರು, ಕುಮಾರ ಕೆಂಜೂರು, ಪುತ್ರನ್ ಹೆಬ್ರಿ, ಪುನಿತ್ ಕಾರ್ಕಳ, ರೇಖಾ ಆತ್ರಾಡಿ, ತ್ರಿವೇಣಿ ಕಟಪಾಡಿ, ಪ್ರಜ್ಞಾ ಶಂಕರನಾರಾಯಣ, ಶೀನಾ ಬೆಳ್ಮಣ್ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!