Monday, December 22, 2025
Monday, December 22, 2025

ಮಣಿಪಾಲ: ಪಲ್ಸ್ ಪೋಲಿಯೋ ಅಭಿಯಾನ ತರಬೇತಿ ಕಾರ್ಯಾಗಾರ

ಮಣಿಪಾಲ: ಪಲ್ಸ್ ಪೋಲಿಯೋ ಅಭಿಯಾನ ತರಬೇತಿ ಕಾರ್ಯಾಗಾರ

Date:

ಮಣಿಪಾಲ, ಡಿ.20: ತಜ್ಞರ ಸಲಹಾ ಗುಂಪಿನ ಶಿಫಾರಸ್ಸಿನನ್ವಯ ದೇಶದಲ್ಲಿ ಪೋಲಿಯೋ ನಿರ್ಮೂಲನೆ ಮಾಡಲು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಸಲುವಾಗಿ ದೇಶದಾದ್ಯಂತ ಡಿಸೆಂಬರ್ 21 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ ಅಭಿಯಾನದ ಆಂಗವಾಗಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಮಣಿಪಾಲ ಹಾಗೂ ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲ ಇವರ ಸಹಯೋಗದೊಂದಿಗೆ ಈ ಅಭಿಯಾನದಲ್ಲಿ ಭಾಗವಹಿಸುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಮಣಿಪಾಲ ಹಾಗೂ ಉಡುಪಿಯ ಆರೋಗ್ಯ ಕಾರ್ಯಕರ್ತರುಗಳು ಹಾಗೂ ಸ್ವಯಂ ಸೇವಕರಾದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್, ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ಹಾಗೂ ಮಣಿಪಾಲ್ ಸ್ಕೂಲ್ ಆಫ್ ನರ್ಸಿಂಗ್ ಮಣಿಪಾಲ ಇವರಿಗೆ ತರಬೇತಿಯು ಕೆ.ಎಂ.ಸಿ. ಇಂಟರ್ಯಾಕ್ಟ್ ಸಭಾಂಗಣದಲ್ಲಿ ನಡೆಯಿತು.

ಪ್ರತೀ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಡಿಸೆಂಬರ್ 21 ರಂದು ಬೆಳಿಗ್ಗೆ ಎಂಟು ಗಂಟೆಯಿಂದ ಸಂಜೆ ಐದು ಗಂಟೆ ವರೆಗೆ ಅಲ್ಲಿನ ಬೂತ್‌ಗಳಲ್ಲಿ ಪೋಲಿಯೋ ಲಸಿಕೆ ನೀಡಲಾಗುವುದು ಹಾಗೂ ಡಿಸೆಂಬರ್ 22 ರಿಂದ 24 ರ ವರೆಗೆ ಆರೋಗ್ಯ ಕಾರ್ಯಕರ್ತರು, ಸ್ವಯಂ ಸೇವಕರು ಮನೆ-ಮನೆ ಭೇಟಿ ನೀಡುವ ಕಾರ್ಯಕ್ರಮವಿದೆ. ಈ ಎಲ್ಲಾ ನಾಲ್ಕು ದಿನಗಳಲ್ಲಿ ಸಂಚಾರ ಕೇಂದ್ರಗಳಲ್ಲಿ (ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣ) ಹಾಗೂ ಹೆಚ್ಚಿನ ಜನ ಸಂದಣಿ ಇರುವ ಪ್ರದೇಶಗಳಲ್ಲಿ, ವಲಸೆ ಪ್ರದೇಶಗಳಲ್ಲಿ ವಿಶೇಷ ಅಭಿಯಾನ ನಡೆಸಲಾಗುವುದು. ಆ ಮೂಲಕ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ನೀಡುವ ಎಲ್ಲಾ ಪ್ರಯತ್ನ ಮಾಡಲಾಗುವುದು.

ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಯಶ್ ಅಲೋಕ್ ಹಾಗೂ ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯವರಾದ ಡಾ. ಶಾಮಿನಿ ಕುಮಾರ್ ಅವರು ಭಾಗವಹಿಸಿದರು. ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ. ಅಶ್ವಿನಿ ಕುಮಾರ್ ಅವರು ಮಾರ್ಗದರ್ಶನ ನೀಡಿದರು. ತರಬೇತಿ ಕಾರ್ಯಾಗಾರದಲ್ಲಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸೇರಿದಂತೆ 150 ಕಾರ್ಯಕರ್ತರು ಭಾಗವಹಿಸಿದ್ದರು. ಈ ಕಾರ್ಯಕರ್ತರು, ಸ್ವಯಂ ಸೇವಕರು ಉಡುಪಿ, ಮಣಿಪಾಲ, ಮಲ್ಪೆ, ಮಣಿಪುರ, ಪೆರ್ಣಂಕಿಲ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಸಹಕರಿಸಲಿದ್ದಾರೆ. ಕೆ.ಎಂ.ಸಿ. ಮಣಿಪಾಲ ಹಾಗೂ ರೋಟರಿ ಕ್ಲಬ್, ಮಣಿಪಾಲ ಸಹ ಈ ಕಾರ್ಯಕ್ರಮದಲ್ಲಿ ಸಹಕಾರ ನೀಡಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಗ್ರವಾದ ಮಟ್ಟಹಾಕಲು ಸಜ್ಜಾಗಿ: ಆಸ್ಟ್ರೇಲಿಯಾ ಪ್ರಧಾನಿ

ಸಿಡ್ನಿ, ಡಿ.21: ಕಳೆದ ವಾರದ ಬೋಂಡಿ ಬೀಚ್ ದಾಳಿಯ ನಂತರ ಆಸ್ಟ್ರೇಲಿಯಾದ...

ಇಸ್ರೋ ಸಂವಹನ ಉಪಗ್ರಹ ಬ್ಲೂಬರ್ಡ್ ಬ್ಲಾಕ್ -2 ಅನ್ನು ಉಡಾವಣೆಗೆ ಸಿದ್ಧತೆ

ನವದೆಹಲಿ, ಡಿ.21: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬುಧವಾರ ಸಂವಹನ...

ರೋಟರಿ ಸಮುದಾಯ ದಳ ಇನ್ನಂಜೆ: ಮನೆ ಹಸ್ತಾಂತರ

ಇನ್ನಂಜೆ, ಡಿ.21: ರೋಟರಿ ಸಮುದಾಯ ದಳ ಇನ್ನಂಜೆ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ...

ಯಕ್ಷಗಾನ ಕಲಾರಂಗ (ರಿ.) ಉಡುಪಿ: ಮನೆ ಹಸ್ತಾಂತರ

ಉಡುಪಿ, ಡಿ.21: ಯಕ್ಷಗಾನ ಕಲಾರಂಗ (ರಿ.) ಉಡುಪಿ ಇವರ ವತಿಯಿಂದ ದಾನಿಗಳ...
error: Content is protected !!