Monday, September 28, 2026
Monday, September 28, 2026

ಶೀರೂರು ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶೀರೂರು ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಉಡುಪಿ, ಡಿ.22: ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಉಡುಪಿ‌ ಶ್ರೀ ಕೃಷ್ಣ ಮಠದ ರಥಬೀದಿಯ ಕನಕನ‌ ಕಿಂಡಿ ಮುಂಭಾಗದಲ್ಲಿ ನಡೆಯಿತು.‌ ಸಾಹಿತಿ ಕಬ್ಬಿನಾಲೆ ವಸಂತ ಭಾರದ್ವಾಜ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಮನೆ ಮನೆಗೆ ಆಹ್ವಾನ ಪತ್ರಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಶ್ರೀ ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯರವರು ಕೃಷ್ಣನ ಸನ್ನಿಧಾನದಲ್ಲಿ ಆಹ್ವಾನ‌ ಪತ್ರಿಕೆ ಇಟ್ಟು ಪ್ರಾರ್ಥನೆ ಸಲ್ಲಿಸಿದರು. ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ಕೋಶಾಧಿಕಾರಿಗಳಾದ ಜಯಪ್ರಕಾಶ್ ಕೆದ್ಲಾಯ, ಸಂಚಾಲಕರಾದ ಸುಪ್ರಸಾದ್ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಸಂದೀಪ್ ಮಂಜ, ಶ್ರೀಕಾಂತ ನಾಯಕ್, ಮಹಿಳಾ ಸಮಿತಿಯ ಸಂಚಾಲಕರುಗಳಾದ ಪದ್ಮಾ ರತ್ನಾಕರ,ನಯನ ಗಣೇಶ್, ವೀಣಾ ಶೆಟ್ಟಿ, ತಾರಾ ಆಚಾರ್ಯ, ನೀತಾ ಪ್ರಭು, ಪ್ರಮುಖರಾದ ಉದಯಕುಮಾರ್ ಶೆಟ್ಟಿ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲು, ಶ್ರೀಕಾಂತ್ ಉಪಾಧ್ಯಾಯ, ಹರೀಶ್ ಬೈಲಕೆರೆ ಮತ್ತು ವಿವಿಧೆಡೆಯಿಂದ ಆಗಮಿಸಿದ ಕೃಷ್ಣ ಭಕ್ತರು ಉಪಸ್ಥಿತರಿದ್ದರು.

ಪ್ರತಿಯೊಬ್ಬ ಕ್ರಷ್ಣಭಕ್ತರೂ ತಮ್ಮ ತಮ್ಮ ಮನೆಯ ಸುತ್ತಮುತ್ತಲಿರುವ ಮನೆಗಳಿಗೆ ತಾವೇ ಆಹ್ವಾನ ಪತ್ರಿಕೆ ಕೊಡುವ ಮೂಲಕ ಎಲ್ಲರೂ ಈ ಅಭಿಯಾನದಲ್ಲಿ ಜೋಡಿಸಿಕೊಂಡು ಉಡುಪಿ ಜಿಲ್ಲೆಯ ಎಲ್ಲ ಮನೆಗಳಿಗೂ ಕ್ರಷ್ಣ ಭಕ್ತರೇ ಆಹ್ವಾನ ಪತ್ರಿಕೆ ತಲುಪಿಸಬೇಕೆಂದು ಶ್ರೀ‌ಮಠದ ವತಿಯಿಂದ ವಿನಂತಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!