Sunday, July 26, 2026
Sunday, July 26, 2026

ಸಮುದಾಯ ಆರೋಗ್ಯ ಕೇಂದ್ರಗಳನ್ನು ಮುಚ್ಚಬೇಡಿ: ಶಾಸಕ ಯಶ್ಪಾಲ್ ಸುವರ್ಣ ಮನವಿ

ಸಮುದಾಯ ಆರೋಗ್ಯ ಕೇಂದ್ರಗಳನ್ನು ಮುಚ್ಚಬೇಡಿ: ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಡಿ.25: ಜನಸಂಖ್ಯೆ ಆಧಾರದ ಮೇಲೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮುಚ್ಚುವ ನಿರ್ಧಾರದಿಂದ ಗ್ರಾಮೀಣ, ಅರಣ್ಯ ಪ್ರದೇಶ ಮತ್ತು ಹಿಂದುಳಿದ ಭಾಗದ ಸಾವಿರಾರು ಜನರು ಮೂಲಭೂತ ಆರೋಗ್ಯ ಸೇವೆಯಿಂದ ವಂಚಿತರಾಗುವ ಭೀತಿ ಉಂಟಾಗಿದ್ದು, ಆರೋಗ್ಯ ಇಲಾಖೆ ತಕ್ಷಣ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾವ್ ರವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದ ಮಲ್ಪೆ ಬಂದರಿನಲ್ಲಿ ಪರ ಊರಿನಿಂದ ಬಂದಿರುವ ಸುಮಾರು 35,000 ಮೀನು ಕಾರ್ಮಿಕರು ಹಾಗೂ ಕ್ಷೇತ್ರದ ಕೆಲವೆಡೆ 25,000 ಕ್ಕೂ ಅಧಿಕ ಕಟ್ಟಡ ನಿರ್ಮಾಣ ಕಾರ್ಮಿಕರು ಸೇರಿದಂತೆ 1 ಲಕ್ಷಕ್ಕೂ ಹೆಚ್ಚು ವಲಸಿಗರು ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದು ಉದ್ಯೋಗ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರು ಹೆಚ್ಚಿನ ಪ್ರಮಾಣದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳ ಮೇಲೆಯೇ ಅವಲಂಬಿತರಾಗಿದ್ದು, ಸ್ಥಳೀಯ ದಾಖಲೆಗಳಿಲ್ಲದೇ ಸ್ಥಳೀಯ ಜನಗಣತಿಯಲ್ಲಿ ಪರಿಗಣಿಸಲ್ಪಟ್ಟಿಲ್ಲ.

ಜಿಲ್ಲೆಯ ಜನರ ಹಾಗೂ ವಲಸಿಗರ ಆರೋಗ್ಯ ಹಿತದೃಷ್ಟಿಯಿಂದ ಆರೋಗ್ಯ ಕೇಂದ್ರಗಳನ್ನು ವಿಲೀನಗೊಳಿಸುವ ಅಥವಾ ಮುಚ್ಚುವ ನಿರ್ಧಾರವನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಜೊತೆಗೆ, ಜಿಲ್ಲೆಯ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಲವರ್ಧನೆ ಮಾಡಿ, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಉಳಿದಿರುವ ವೈದ್ಯರು, ನರ್ಸ್‌ಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಮನವಿಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!