Sunday, September 6, 2026
Sunday, September 6, 2026

ವಿಶ್ವ ಬೈಸಿಕಲ್ ದಿನಾಚರಣೆ: ಬೈಸಿಕಲ್ ಜಾಥಾ

ವಿಶ್ವ ಬೈಸಿಕಲ್ ದಿನಾಚರಣೆ: ಬೈಸಿಕಲ್ ಜಾಥಾ

Date:

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ನೆಹರು ಯುವ ಕೇಂದ್ರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ವಿಶ್ವ ಬೈಸಿಕಲ್ ದಿನಾಚರಣೆಯ ಪ್ರಯುಕ್ತ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮಲ್ಪೆ ಬೀಚ್‌ವರೆಗೆ ನಡೆದ ಬೈಸಿಕಲ್ ಜಾಥಾಕ್ಕೆ ಇಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿ, ನಂತರ ಮಲ್ಪೆ ಬೀಚ್‌ನಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ರ‍್ಯಾಲಿಯಲ್ಲಿ ಡಿ.ಎಫ್.ಓ ಆಶಿಶ್ ರೆಡ್ಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸೈಕ್ಲಿಸ್ಟ್ಗಳು ಹಾಗೂ ಮತ್ತಿತರರು ಭಾಗವಹಿಸಿದ್ದರು. ನೆಹರು ಯುವ ಕೇಂದ್ರ ಜಿಲ್ಲಾ ಯುವ ಸಮನ್ವಯಾಧಿಕಾರಿ ವಿಲ್ಫ್ರೆಡ್ ಡಿಸೋಜಾ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ವಂದಿಸಿದರು.

ಸೈಕ್ಲಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸಂತೋಷ್ ಕುಮಾರ್, ಜಾನ್ ರಾಬರ್ಟ್ ಡಿ ಸಿಲ್ವಾ, ರಾಜೇಶ್ ನಾಯಕ್, ಡಾ. ತಿಲಕ್ ಚಂದ್ರ ಪಾಲ್, ಡಾ. ರಾಜೇಶ ಭಕ್ತ, ಡಾ. ಗುರುರಾಜ್ ಕೃಷ್ಣಮೂರ್ತಿ, ರಾಷ್ಟ್ರಮಟ್ಟದ ಸೈಕ್ಲಿಸ್ಟ್ ಶ್ರೀನಿಧಿ ಉರಾಳ, ಅಂತರಾಷ್ಟ್ರೀಯ ಮಟ್ಟದ ಸೈಕ್ಲಿಸ್ಟ್ ಗಳಾದ ಗಣೇಶ್ ನಾಯಕ್ ಹಾಗೂ ಹರ್ಷೇಂದ್ರ ಅವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!