Monday, July 27, 2026
Monday, July 27, 2026

ಶ್ರೀ ಕಾಳಿಕಾಂಬಾ ಭಜನಾ ಸಂಘ: ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಸ್ಪರ್ಧೆಗಳು

ಶ್ರೀ ಕಾಳಿಕಾಂಬಾ ಭಜನಾ ಸಂಘ: ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಸ್ಪರ್ಧೆಗಳು

Date:

ತೆಂಕನಿಡಿಯೂರು, ಡಿ. 28: ಇಲ್ಲಿನ ಶ್ರೀ ಕಾಳಿಕಾಂಬಾ ಭಜನಾ ಸಂಘದ ವತಿಯಿಂದ ಜನವರಿ 15. 2026, ಗುರುವಾರ ಮಕರ ಸಂಕ್ರಾಂತಿ ವಿಶೇಷ ಕಾರ್ಯಕ್ರಮವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಉಡುಪಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧಾ ವಿವರಗಳು ಈ ಕೆಳಗಿನಂತಿವೆ.

ಉಡುಪಿ ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆಯ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಭಕ್ತಿಗೀತೆ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ. ಉಡುಪಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ, ಭಾವಗಾನ ಸ್ಪರ್ಧೆ.ಕಾಲೇಜು ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ, ಭಾಷಣ ಸ್ಪರ್ಧೆ ವಿಷಯ: ’21ನೇ ಶತಮಾನದಲ್ಲಿ ವಿಜ್ಞಾನ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ- ಸಾಧ್ಯತೆಗಳು ಮತ್ತು ಸವಾಲುಗಳು (4+1 ನಿಮಿಷಗಳು)

ಆಸಕ್ತರು ಸ್ಪರ್ಧಾ ದಿನದಂದು ಬೆಳಗ್ಗೆ 9.00 ರಿಂದ 9.30 ಗಂಟೆಯ ಒಳಗೆ ಶಾಲಾ ಮುಖ್ಯಸ್ಥರ ಧೃಢೀಕರಣದೊಂದಿಗೆ ನೋಂದಣಿ ಮಾಡಬೇಕು. ಪ್ರತಿ ಸ್ಪರ್ಧೆಗೆ ಒಂದು ಸಂಸ್ಥೆಯಿಂದ ಇಬ್ಬರು ವಿದ್ಯಾರ್ಥಿಗಳಿಗೆ, ಹಾಗೂ ರಸಪ್ರಶ್ನೆ ಸ್ಪರ್ಧೆಗಳಿಗೆ ಪ್ರತಿ ಸಂಸ್ಥೆಯಿಂದ ಇಬ್ಬರು ವಿದ್ಯಾರ್ಥಿಗಳನ್ನೊಳಗೊಂಡ ಒಂದು ತಂಡಕ್ಕೆ ಮಾತ್ರ ಅವಕಾಶ. ಚಿತ್ರಕಲಾ ಸ್ಪರ್ಧೆಗೆ ವಿಷಯವನ್ನು ಸ್ಥಳದಲ್ಲೇ ನೀಡಲಾಗುವುದು. ಸ್ಪರ್ಧಾ ವಿಜೇತರಿಗೆ ಅದೇ ದಿನ ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ನಗದು ಬಹುಮಾನ ನೀಡಲಾಗುವುದು ಹೆಚ್ಚಿನ ಮಾಹಿತಿಗೆ ಹಾಗೂ ನೋಂದಣಿಗೆ ಮೊಬೈಲ್ ಸಂ. 9964024066 ಸಂಪರ್ಕಿಸಬೇಕಾಗಿ ಸಂಘದ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!