Friday, February 27, 2026
Friday, February 27, 2026

ಪುಸ್ತಕಗಳನ್ನು ಓದುವುದರಿಂದ ಕಲ್ಪನಾ ಶಕ್ತಿ ಹೆಚ್ಚಿಸಲು ಸಾಧ್ಯ: ಡುಂಡಿರಾಜ್

ಪುಸ್ತಕಗಳನ್ನು ಓದುವುದರಿಂದ ಕಲ್ಪನಾ ಶಕ್ತಿ ಹೆಚ್ಚಿಸಲು ಸಾಧ್ಯ: ಡುಂಡಿರಾಜ್

Date:

ಉಡುಪಿ, ಡಿ.31: ಉಡುಪಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ಜನಪ್ರಿಯ ಅಭಿಯಾನದಲ್ಲಿ ಒಂದಾದ ಮನೆಯೇ ಗ್ರಂಥಾಲಯ ಅಭಿಯಾನದ 175 ನೇ ಗ್ರಂಥಾಲಯವನ್ನು ಖ್ಯಾತ ಸಾಹಿತಿ ಹನಿಗವಿ ಹೆಚ್.ಡುಂಡಿರಾಜ್ ರವರು ಸಿದ್ದಬಸಯ್ಯಸ್ವಾಮಿ ಚಿಕ್ಕಮಠ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಕಸಾಪ ಉಡುಪಿ ತಾಲೂಕು ಘಟಕದ ವಿನೂತನ ಕಾರ್ಯಕ್ರಮವಾಗಿದೆ. ಪುಸ್ತಕಗಳನ್ನು ಓದುವುದರಿಂದ ನಮ್ಮ ಭಾಷಾಜ್ಞಾನ ಹೆಚ್ಚುವುದು ಮಾತ್ರವಲ್ಲ ಕಲ್ಪನಾ ಶಕ್ತಿ ಇಮ್ಮಡಿಯಾಗುತ್ತದೆ, ಮೆದುಳಿಗೆ ಒಳ್ಳೆ ಕೆಲಸ ಸಿಗುತ್ತದೆ, ಚಿಂತೆಯನ್ನೂ ದೂರ ಮಾಡುತ್ತವೆ. ಈಗಾಗಲೇ ಸುಮಾರು ನಾಲ್ಕು ಸಾವಿರಕ್ಕಿಂತಲೂ ಅಧಿಕ ಪುಸ್ತಕಗಳನ್ನು ಕಸಾಪ ಉಡುಪಿ ತಾಲೂಕು ಘಟಕ ನೀಡಿರುವುದು ಅಭಿನಂದನಾರ್ಹ ಎಂದರು.

ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ., ಉಡುಪಿ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು, ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯ ಅಸ್ಟ್ರೋ ಮೋಹನ್, ಜಿಲ್ಲಾ ಕಸಾಪ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು, ಪ್ರವೀಣಾ ಮೋಹನ್, ಪ್ರಜ್ಞಾ ಕೊಡವೂರು, ಸಂಹಿತ್, ಆಶ್ಲೇಷ್, ಉಮಾ ಚಿಕ್ಕಮಠ, ಶ್ರೀಗುರು ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಿರಿಯಡಕ: ಉದ್ಯೋಗ ಮೇಳ

ಹಿರಿಯಡಕ, ಫೆ.27: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ...

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...

90,000 ಕೋಟಿ ರೂಪಾಯಿಗಳ ಒಪ್ಪಂದಗಳಿಗೆ ಜಪಾನ್ ಕಂಪನಿಗಳೊಂದಿಗೆ ಉತ್ತರ ಪ್ರದೇಶ ಸರ್ಕಾರ ಸಹಿ

ಯು.ಬಿ.ಎನ್.ಡಿ., ಫೆ.27: ಉತ್ತರ ಪ್ರದೇಶ ಸರ್ಕಾರವು ಜಪಾನಿನ ವಿವಿಧ ಕಂಪನಿಗಳೊಂದಿಗೆ 90...

ಎನ್.ಸಿ.ಪಿ. ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

ಮುಂಬಯಿ, ಫೆ.27: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ.) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ...
error: Content is protected !!