Saturday, July 25, 2026
Saturday, July 25, 2026

ಟಿ. ಎನ್. ಸೀತಾರಾಂ ಅವರಿಗೆ ‘ಪಂಚಮಿ ಪುರಸ್ಕಾರ 2026’

ಟಿ. ಎನ್. ಸೀತಾರಾಂ ಅವರಿಗೆ ‘ಪಂಚಮಿ ಪುರಸ್ಕಾರ 2026’

Date:

ಉಡುಪಿ, ಡಿ.31: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯಿಂದ ಕೊಡ ಮಾಡುವ ಪಂಚಮಿ ಟ್ರಸ್ಟ್ ಉಡುಪಿ ಪ್ರಾಯೋಜಿತ ‘ಪಂಚಮಿ ಪುರಸ್ಕಾರ 2026’ ಕ್ಕೆ ಕನ್ನಡದ ಹಿರಿಯ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ, ನಟ, ನಾಟಕಕಾರ, ಸಾಹಿತಿ ಟಿ. ಎನ್. ಸೀತಾರಾಂ ಆಯ್ಕೆಯಾಗಿದ್ದಾರೆ. ಜನವರಿ ತಿಂಗಳಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಗೌರವಧನ ಒಂದು ಲಕ್ಷದೊಂದಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಹೆಚ್‌.ಪಿ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಪ್ರಶಸ್ತಿ ಸಮಿತಿಯ ಸಂಚಾಲಕ ಜನಾರ್ದನ ಕೊಡವೂರು​, ಉಪಾಧ್ಯಕ್ಷ ಮಧುಸೂದನ ಹೇರೂರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!