Friday, January 16, 2026
Friday, January 16, 2026

ಶೇ.50 ರ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಶೇ.50 ರ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

Date:

ಉಡುಪಿ, ಜ.2: ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2026 ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705), ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ https://kpp.karnataka.gov.in ನಲ್ಲಿ ರಿಯಾಯಿತಿ ಸೌಲಭ್ಯ ಲಭ್ಯವಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 700ಕ್ಕೂ ಹೆಚ್ಚಿನ ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಪ್ರಾಧಿಕಾರದ ಆಡಳತಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!