Monday, October 19, 2026
Monday, October 19, 2026

ಪಂಚವರ್ಣ ಮಹಿಳಾ ಮಂಡಲ: ಅರಿವು ನಿಮ್ಮಗಿರಲಿ ನೆರವು ಮಾಲಿಕೆ

ಪಂಚವರ್ಣ ಮಹಿಳಾ ಮಂಡಲ: ಅರಿವು ನಿಮ್ಮಗಿರಲಿ ನೆರವು ಮಾಲಿಕೆ

Date:

ಕೋಟ, ಜ.2: ಪ್ರತಿಯೊಬ್ಬರ ಆರೋಗ್ಯ ಅವರ ಅಂಗೈನಲ್ಲೆ ಇರುತ್ತದೆ ಆದರೆ ಅದರ ಬಗ್ಗೆ ಯಾರೂ ಕೂಡಾ ಯೋಚಿಸಿದಿರುವು ಬೇಸರದ ಸಂಗತಿ ಎಂದು ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರೇಖಿ ಚಿಕಿತ್ಸಾ ತಜ್ಞ ಕಾರ್ಕಡ ನಾರಾಯಣ ಆಚಾರ್ ಹೇಳಿದರು. ಮಂಗಳವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲ ಇದರ ಮಾರ್ಗದರ್ಶನದಲ್ಲಿ ಕೋಟ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಅರಿವು ನಿಮಗಿರಲಿ ನೆರವು ೧೪ನೇ ಮಾಲಿಕೆ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು.

ಕೋಟ ಗ್ರಾಮ ಪಂಚಾಯತ್ ಪ್ರಥಮ ಪ್ರಜೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಪಂಚವರ್ಣ ಸಂಘಟನೆಯ ಗೌರವ ಸಲಹೆಗಾರರಾದ ಪ್ರೇಮಾ ಶೆಟ್ಟಿ, ಕೋಟ ಪಂಚಾಯತ್ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮಾಲತಿ ಶೇಖರ್, ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ,ಸಂಜೀವಿನಿ ಒಕ್ಕೂಟದ ಸಂಪನ್ಮೂಲ ವ್ಯಕ್ತಿ ಸಹನಾ ಹೆಬ್ಬಾರ್ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ವಸಂತಿ ಹಂದಟ್ಟು ಸ್ವಾಗತಿಸಿದರು. ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ಸದಸ್ಯೆ ವೀಣಾ ಪ್ರಕಾಶ್ ವಂದಿಸಿದರು. ಕೋಟ ಗ್ರಾಮ ಪಂಚಾಯತ್ ಸಂಜೀವಿನಿ ಒಕ್ಕೂಟ ಸಹಕಾರ ನೀಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!