ಕುಂದಾಪುರ, ಜ.4: ಶ್ರೀಮದ್ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಪ.ಪೂ.ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿಗಳವರ ಹಾಗೂ ಪ.ಪೂ. ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳವರ ದೈವಜ್ಞ ದರ್ಶನ ಕಾರ್ಯಕ್ರಮವು ಜ.7 ರಂದು ಬೆಳಿಗ್ಗೆ 10 ಗಂಟೆಗೆ ಕುಂದಾಪುರದ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ ನಡೆಯಲಿದೆ. ಅಂದು ಶ್ರೀಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಶಾಸ್ತ್ರಿ ಸರ್ಕಲ್ ನಿಂದ ಪುರಮೆರವಣಿಗೆಯೊಂದಿಗೆ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಬರಮಾಡಿಕೊಳ್ಳಲಾಗುವುದು.
ಸಭಾ ಕಾರ್ಯಕ್ರಮದ ಬಳಿಕ ದೈವಜ್ಞ ಬ್ರಾಹ್ಮಣ ಸಮಾಜದ ವತಿಯಿಂದ ಶ್ರೀ ಗುರುಗಳ ಪಾದುಕಾ ಪೂಜೆ, ಶ್ರೀ ಗುರುಗಳಿಗೆ ಫಲ-ಪುಷ್ಪ ಸಮರ್ಪಣೆ ನೆರವೇರಲಿದೆ. ನಂತರ ಶ್ರೀ ಸ್ವಾಮೀಜಿಗಳವರಿಂದ ಆಶೀರ್ವಚನ ನುಡಿ, ಫಲ-ಮಂತ್ರಾಕ್ಷತೆ ವಿತರಣೆ ಹಾಗೂ “ಅನ್ನ ಸಂತರ್ಪಣೆ” ಕಾರ್ಯಕ್ರಮ ನಡೆಯಲಿದೆ ಎಂದು ಕುಂದಾಪುರ ದೈವಜ್ಞ ಬ್ರಾಹ್ಮಣ ಸಮಾಜದ ಪ್ರಕಟಣೆ ತಿಳಿಸಿದೆ.




By
ForthFocus™