Tuesday, September 8, 2026
Tuesday, September 8, 2026

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಭೇಟಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಭೇಟಿ

Date:

ಕಾಪು, ಜ.4: ಖ್ಯಾತ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಅವರು ಜನವರಿ 3 ರ ಸಂಜೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು. ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.

ಪೂಜಾ ಸಂದರ್ಭದಲ್ಲಿ ಆಗಮಿಸಿದ್ದ ಗಾಯಕ ವಿಜಯ ಪ್ರಕಾಶ್ ಕರ್ನಾಟಕದ ಬೃಹತ್ ಘಂಟೆಯನ್ನು ಬಾರಿಸಿದರು. ನಂತರ ನಿತ್ಯ ಅನ್ನದಾನ ನಡೆಯುತ್ತಿರುವುದರಿಂದ ಒಂದು ದಿನದ ವಿಶೇಷ ಅನ್ನದಾನ ಸೇವೆಯನ್ನು ನೀಡಿ, ನವದುರ್ಗಾ ಲೇಖನ ಮಂಟಪದ ಲೇಖನ ಯಜ್ಞದ ಪುಣ್ಯ ಭೂಮಿಯಲ್ಲಿ ಮೊದಲ ದಿನದ ಲೇಖವನ್ನು ಬರೆದರು ಇನ್ನುಳಿದ ಲೇಖನವನ್ನು 9 ದಿನಗಳವರೆಗೆ ಮನೆಯಲ್ಲಿಯೇ ಬರೆದು ಶಾಶ್ವತ ಸೇವೆಯೊಂದಿಗೆ ಸಮರ್ಪಿಸುವುದಾಗಿ ಹೇಳಿದರು. ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯಿಂದ ಗೌರವಿಸಲಾಯಿತು.

ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾದವ ಆರ್. ಪಾಲನ್, ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಮತ್ತು ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ಜಯರಾಮ ಆಚಾರ್ಯ, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!