Monday, September 7, 2026
Monday, September 7, 2026

ಉದ್ಯಾವರ: ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಉದ್ಯಾವರ: ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

Date:

ಉದ್ಯಾವರ, ಜ.5: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ 60 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿತ್ರೋಡಿ ಪ್ರವೀಣ್ ಮನೆಯಿಂದ ರಮೇಶ್ ಕುಮಾರ್ ಮನೆ ವರೆಗೆ ರಸ್ತೆ ಅಭಿವೃದ್ಧಿಗೆ – 10 ಲಕ್ಷ, ಅಂಕುದ್ರು ಮುಖ್ಯ ರಸ್ತೆ ಕಾಂಕ್ರೀಟೀಕರಣ – 10 ಲಕ್ಷ, ಸಂಪಿಗೆನಗರ ಮಹಾಕಾಳಿ 1ನೇ ಅಡ್ಡ ರಸ್ತೆ ಅಭಿವೃದ್ಧಿ – 10 ಲಕ್ಷ, ಕೇದಾರ್ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬಳಿ ರಸ್ತೆ ಅಭಿವೃದ್ಧಿಗೆ – 10 ಲಕ್ಷ, ರಾಜಾರಾಮ್ ಭಟ್ ಮನೆ ಬಳಿ ರಸ್ತೆ ಅಭಿವೃದ್ಧಿ – 10 ಲಕ್ಷ, ಪಿತ್ರೋಡಿ ನೀಲಾಧರ್ ಸಾಲಿಯಾನ್ ಮತ್ತು ಸುಗಂಧಿ ಶೆಟ್ಟಿ ಮನೆ ಬಳಿ ರಸ್ತೆ ಕಾಂಕ್ರೀಟೀಕರಣ – 10 ಲಕ್ಷ ಸೇರಿದಂತೆ ಒಟ್ಟು 60 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಸದಸ್ಯರಾದ ರಾಧಾಕೃಷ್ಣ ಶ್ರೀಯಾನ್, ಜಿತೇಂದ್ರ ಶೆಟ್ಟಿ, ಯೋಗೀಶ್ ಕೋಟ್ಯಾನ್, ಸಚಿನ್ ಪಿತ್ರೋಡಿ, ರಮಾನಂದ ಸೆರ್ವೇಗಾರ್, ಮಿಥೇಶ್, ಚೇತನ್, ವೀಣಾ, ಸರಿತಾ, ರೇಖಾ, ಪ್ರಮೀಳಾ ಹಾಗೂ ಸ್ಥಳೀಯ ಪ್ರಮುಖರಾದ ವಿಜಯ್ ಕುಮಾರ್ ಉದ್ಯಾವರ, ಸಂತೋಷ್ ಬೊಳ್ಜೆ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!