Tuesday, March 3, 2026
Tuesday, March 3, 2026

ಜ. 25 ರಿಂದ 27: ಉಡುಪಿಯಲ್ಲಿ ಫಲ- ಪುಷ್ಪ ಪ್ರದರ್ಶನ

ಜ. 25 ರಿಂದ 27: ಉಡುಪಿಯಲ್ಲಿ ಫಲ- ಪುಷ್ಪ ಪ್ರದರ್ಶನ

Date:

ಉಡುಪಿ, ಜ.7: ತೋಟಗಾರಿಕಾ ಇಲಾಖೆ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಜನವರಿ 25 ರಿಂದ 27 ರವರೆಗೆ ರೈತ ಸೇವಾ ಕೇಂದ್ರ ಶಿವಳ್ಳಿ ತೋಟಗಾರಿಕಾ ಕ್ಷೇತ್ರ ದೊಡ್ಡಣ್ಣಗುಡ್ಡೆಯಲ್ಲಿ ಫಲ-ಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಸದರಿ ಫಲ-ಪುಷ್ಪ ಪ್ರದರ್ಶನದಲ್ಲಿ ತೋಟಗಾರಿಕೆ ಚಟುವಟಿಕೆ ಹೊಂದಿರುವವರಿಗೆ ಹಾಗೂ ಸಾವಯವ ಉತ್ಪನ್ನಗಳ ಮಳಿಗೆದಾರರಿಗೆ ಆದ್ಯತೆ ನೀಡಲಾಗುತ್ತಿದ್ದು, ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ ಮಾರಾಟಗಾರರು, ಬ್ಯಾಂಕ್ ಹಾಗೂ ಆಹಾರ ಮಳಿಗೆದಾರರಿಗೆ 100 ಚದರ ಅಡಿ ಗಾತ್ರದ ಮಳಿಗೆಗೆ 3500 ರೂ.ದರ ನಿಗದಿಪಡಿಸಲಾಗಿದೆ.

ಮಳಿಗೆ ತೆರೆಯಲು ಬಯಸುವ ಆಸಕ್ತರು ಮಳಿಗೆಗಳ ಮೊತ್ತವನ್ನು ಆನ್ ಲೈನ್ ಕ್ಯೂ.ಆರ್ ಕೋಡ್ ಮೂಲಕವೇ ರೈತ ಸೇವಾ ಕೇಂದ್ರದ ಖಾತೆಗೆ ಜನವರಿ 20 ರ ಒಳಗಾಗಿ ಪಾವತಿಸಬಹುದಾಗಿದೆ. ಹೆಸರು ನೋಂದಾಯಿಸಲು ಇಚ್ಛಿಸುವವರು ಸಹಾಯಕ ತೋಟಗಾರಿಕಾ ನಿರ್ದೇಶಕರ ದೂರವಾಣಿ ಸಂಖ್ಯೆ 9741255168 ಅನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಉಡುಪಿ, ಮಾ.2: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ...

ಯೋಜನಾ ವರದಿ ಕಾರ್ಯಾಗಾರ

ಹಿರಿಯಡಕ, ಮಾ.2: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ರಾಜ್ಯಶಾಸ್ತ್ರ ವಿಭಾಗದ...
error: Content is protected !!