Monday, October 5, 2026
Monday, October 5, 2026

ಸಾಲಿಗ್ರಾಮ ಪ.ಪಂ: ಸ್ವಚ್ಛತಾ ನಿಯಮ ಉಲ್ಲಂಘಿಸಿದಲ್ಲಿ ದಂಡ

ಸಾಲಿಗ್ರಾಮ ಪ.ಪಂ: ಸ್ವಚ್ಛತಾ ನಿಯಮ ಉಲ್ಲಂಘಿಸಿದಲ್ಲಿ ದಂಡ

Date:

ಉಡುಪಿ, ಜ.7: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮ 2016, ಘನತ್ಯಾಜ್ಯ ನಿರ್ವಹಣೆ ಉಪನಿಯಮ 2019, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮ 2016 ಹಾಗೂ (c&d waste) 2016 ರ ನಿಯಮದ ಉಲ್ಲಂಘನೆ ಮಾಡಿದಲ್ಲಿ ಸರಕಾರದ ಆದೇಶದಂತೆ ನಿಗದಿತ ದಂಡ ವಿಧಿಸಲಾಗುವುದು. ದಿನನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ಮೂಲದಲ್ಲಿಯೇ ಹಸಿಕಸ/ಒಣಕಸವನ್ನಾಗಿ ವಿಂಗಡಿಸಿ ಘನತ್ಯಾಜ್ಯ ವಾಹನಕ್ಕೆ ನೀಡುವಂತೆ, ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ, ಶೌಚಾಲಯ ಗುಂಡಿ ಸ್ವಚ್ಛ ಮಾಡಲು ಕಡ್ಡಾಯವಾಗಿ ಸಕ್ಕಿಂಗ್ ಯಂತ್ರವನ್ನು ಬಳಸುವಂತೆ ಹಾಗೂ ಸ್ವಚ್ಛತೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ IPGRS ವೆಬ್‌ಸೈಟ್ ನಲ್ಲಿ ದೂರು ದಾಖಲಿಸುವಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಜಾನಕಿ ನಮನ’

ಉಡುಪಿ, ಅ.4: ಉಡುಪಿಯ ಕೋಸ್ಟಲ್‌ ಸ್ಟಾರ್‌ ಮ್ಯೂಸಿಕ್‌ ಕ್ಲಬ್‌ ಆಶ್ರಯದಲ್ಲಿ ಕರ್ಣಾಟಕ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ನಿಖಿಲ್ ಗುಪ್ತ ಭೇಟಿ

ಕಾಪು, ಅ.4: ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...

ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ

ಮಣಿಪಾಲ, ಅ.4: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ...
error: Content is protected !!