Thursday, November 19, 2026
Thursday, November 19, 2026

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Date:

ಬೆಳ್ಮಣ್, ಜ.8: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಹಾಗೂ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ನೇತೃತ್ವದಲ್ಲಿ ಅಬ್ಬನಡ್ಕ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು. ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಉಪಾಧ್ಯಕ್ಷರಾದ ಬೋಳ ರಘುವೀರ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಕರಾವಳಿ ಭಜನಾ ಸಂಸ್ಕಾರ ವೇದಿಕೆಯ ಕೇಂದ್ರ ಸಮಿತಿಯ ಉಪಾಧ್ಯಕ್ಷರು, ಕಾರ್ಕಳ ಭಜನಾ ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ಶ್ರೀಕಾಂತ್ ಪ್ರಭು ಪಳ್ಳಿ, ಕಾರ್ಕಳ ಭಜನಾ ಪರಿಷತ್ತಿನ ಉಪಾಧ್ಯಕ್ಷರು ಹಾಗೂ ಬೆಳ್ಮಣ್ಣು ವಲಯದ ಭಜನಾ ಪರಿಷತ್ತಿನ ವಲಯಾಧ್ಯಕ್ಷರಾದ ಸಚಿತ್ ಪೂಜಾರಿ ನಂದಳಿಕೆ, ಕಾರ್ಕಳ ಭಜನಾ ಒಕ್ಕೂಟ ಬೆಳ್ಮಣ್ಣು ವಲಯದ ವಲಯಾಧ್ಯಕ್ಷರಾದ ರಾಜೇಂದ್ರ ಶೆಟ್ಟಿಗಾರ್. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ. ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ರಾಜೇಶ್ ಕೋಟ್ಯಾನ್, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಅಧ್ಯಕ್ಷರಾದ ಕೀರ್ತನ್ ಪೂಜಾರಿ ಬೋಳ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸದಸ್ಯರಾದ ಪದ್ಮಶ್ರೀ ಪೂಜಾರಿ, ವೀಣಾ ಪೂಜಾರಿ, ಲಲಿತಾ ಆಚಾರ್ಯ, ಲೀಲಾ ಪೂಜಾರಿ ಮೊದಲಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...

‘ಋತು ತಾರೆ’ ವಿನೂತನ ಕಾರ್ಯಕ್ರಮ

ಬೆಂಗಳೂರು, ನ.೧೯: ಮಹಿಳೆಯರ ಮಧ್ಯವಯಸ್ಸಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸೂಕ್ತ...

ಬಂಟ್ವಾಳ: ಹೊಂಡ-ಗುಂಡಿಗಳ ವರದಿ ಬಗ್ಗೆ ಸಿಎಂ ಕಛೇರಿ ಸ್ಪಂದನೆ

ಬಂಟ್ವಾಳ, ನ.19: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲಕ ಹಾದುಹೋಗುವ...

ಮುರಳಿ ಕಡೆಕಾರ್ ಇವರಿಗೆ ಶಾರದಾಕೃಷ್ಣ ಪ್ರಶಸ್ತಿ-2027

ಉಡುಪಿ, ನ.18: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ...
error: Content is protected !!