ಮಣಿಪಾಲ, ಜ.12: ಸ್ವಾಮಿ ವಿವೇಕಾನಂದರ ತತ್ವ ಮತ್ತು ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಯಶಸ್ಸು ಪಡೆಯಲು ಸಹಕಾರಿಯಾಗುತ್ತದೆ ಎಂದು ಉಪನ್ಯಾಸಕ ಡಾ. ಗಣೇಶ್ ಪ್ರಸಾದ್ ಜಿ. ನಾಯಕ್ ಹೇಳಿದರು.

ಅವರು, ಜ. 12ರಂದು ಸರ್ಕಾರಿ ಸಂಯುಕ್ತ ಪ್ರೌಢಶಾಲೆ ರಾಜೀವನಗರದಲ್ಲಿ ಜೆಸಿಐ ಉಡುಪಿ ಸಿಟಿ ಇದರ ವತಿಯಿಂದ ನಡೆದ ಸ್ವಾಮಿ ವಿವೇಕಾನಂದ ಜಯಂತಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಬದುಕಿನಲ್ಲಿ ಏಕಾಗ್ರತೆ ತಾಳ್ಮೆ ಜೀವನದಲ್ಲಿ ಗುರಿ ಮತ್ತು ಉದ್ದೇಶವಿರಬೇಕು ಎಂದು ಸ್ವಾಮೀಜಿಯವರು ಬಹಳ ಹಿಂದೆಯೇ ಹೇಳಿದ್ದರು. ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿಯೊಂದಿಗೆ ಮುನ್ನಡೆದಾಗ ಬದುಕಿನಲ್ಲಿ ಸಾರ್ಥಕತೆ ಗಳಿಸಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ಜೇಸಿ ಅಧ್ಯಕ್ಷ ಶ್ರೀರಾಜ್ ಆಚಾರ್ಯ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ಪಿ ನೆರವೇರಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಹಿರಿಯ ರಂಗ ನಿರ್ದೇಶಕ ಬಾಸುಮಾ ಕೊಡಗು, ಕಾವ್ಯವಾಣಿ ಕೊಡಗು , ಕಾರ್ಯಕ್ರಮ ನಿರ್ದೇಶಕರಾದ ಗಗನಾ, ಅರವಿಂದ್ ರುದ್ರಪ್ಪ ಉಪಸ್ಥಿತರಿದ್ದರು. ರಾಘವೇಂದ್ರ ಪ್ರಭು ಕರ್ವಾಲು ಸ್ವಾಗತಿಸಿ, ಶಾಲಾ ಶಿಕ್ಷಕ ಸಂಜೀವ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.






By
ForthFocus™