Friday, February 27, 2026
Friday, February 27, 2026

ಜಿಲ್ಲಾ ಮಟ್ಟದ ಸಂಜೀವಿನಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ

ಜಿಲ್ಲಾ ಮಟ್ಟದ ಸಂಜೀವಿನಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ

Date:

ಉಡುಪಿ, ಜ.15: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಉಡುಪಿ ವತಿಯಿಂದ ದಿನಾಂಕ 17.01.2026 ರಿಂದ 19.01.2026 ರ ವರಗೆ ಉಡುಪಿ ಪರ್ಯಾಯ ಮಹೋತ್ಸವದ ಪ್ರಯುಕ್ತ ಉಡುಪಿ ತಾಲೂಕು ಪಂಚಾಯತ್ ಆವರಣದಲ್ಲಿ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನ ಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯಲಿದೆ. ಈ ಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ಗೃಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು,ಕೃತಕ ಆಭರಣ,ಬಟ್ಟೆ ಬ್ಯಾಗ್, ಆಯುರ್ವೇದಿಕ್ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಮಣ್ಣಿನ ಹಣತೆ, ಗೋ ಉತ್ಪನ್ನ,, ಹೆಬ್ರಿ ಹನಿ ಹಾಗೂ ಆಹಾರ ಉತ್ಪನ್ನಗಳು ಲಭ್ಯವಿರುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹ ನೀಡಬೇಕೆಂದು ಉಡುಪಿ ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...

90,000 ಕೋಟಿ ರೂಪಾಯಿಗಳ ಒಪ್ಪಂದಗಳಿಗೆ ಜಪಾನ್ ಕಂಪನಿಗಳೊಂದಿಗೆ ಉತ್ತರ ಪ್ರದೇಶ ಸರ್ಕಾರ ಸಹಿ

ಯು.ಬಿ.ಎನ್.ಡಿ., ಫೆ.27: ಉತ್ತರ ಪ್ರದೇಶ ಸರ್ಕಾರವು ಜಪಾನಿನ ವಿವಿಧ ಕಂಪನಿಗಳೊಂದಿಗೆ 90...

ಎನ್.ಸಿ.ಪಿ. ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

ಮುಂಬಯಿ, ಫೆ.27: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ.) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ...

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು

ಚೆನ್ನೈ, ಫೆ.26: ಇಲ್ಲಿಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್...
error: Content is protected !!